AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Diesel Price Today, 04-01-2022: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. 

Petrol Rate: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jan 04, 2022 | 7:45 AM

Share

Petrol Diesel Price Today |ದೆಹಲಿ: ಪೆಟ್ರೋಲ್​-ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯೂ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ಅದರಂತೆ ಸರ್ಕಾರಿ ತೈಲ ಕಂಪನಿಗಳು ಇಂದು ಮಂಗಳವಾರ (ಜನವರಿ​ 04) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:44 am, Tue, 4 January 22

Follow Us
TV9 Web
TV9 Web

TV9 Kannada

Read More
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್