AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಇಂಧನ ದರ ಸ್ಥಿರ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ

Petrol Diesel Price Today, 06-01-2022: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

Petrol Rate: ಇಂಧನ ದರ ಸ್ಥಿರ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Jan 06, 2022 | 9:00 AM

Share

ಕರ್ನಾಟಕ ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕದ ಹಿನ್ನೆಲೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿ ಇರುತ್ತದೆ. ಈ ನಡುವೆ ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರ (Diesel price) ಇಳಿಕೆಯಾಗಿದೆಯಾ? ಅಥವಾ ಏರಿಕೆಯಾಗಿದೆಯಾ? ಎಂಬ ಕುತೂಹಲ ಹಲವರಿಗಿದೆ. ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಜನವರಿ 06) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆದರೆ ದರ ಸ್ಥಿರವಾಗಿದ್ದು, ಏರಿಳಿತ ಕಂಡುಬಂದಿಲ್ಲ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

Petrol Rate: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ

ಕೊರೊನಾ ಕೇಕೆ! ಇಂದಿನಿಂದ 15 ದಿನ ಶಾಲೆ-ಕಾಲೇಜು ಬಂದ್: ಖಾಸಗಿ ಶಾಲಾ ಒಕ್ಕೂಟ ಕಿಡಿ, ಪಾಳಿ ಪದ್ದತಿಯಲ್ಲಿ ಶಾಲೆ ನಡೆಸಲು ಮನವಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ