ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ವೀಕೆಂಡ್ ಕರ್ಫ್ಯೂ ಜಾರಿಯಾದ ಹಿನ್ನೆಲೆ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ವರೆಗೆ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ಮತ್ತೆ ವಾಹನಗಳು ಓಡಾಟ ನಡೆಸುತ್ತಿವೆ. ವೀಕೆಂಡ್ ಕರ್ಫ್ಯೂ ಬಳಿಕ ಇಂದು ಇಂಧನ ದರ ಎಷ್ಟಿದೆ ಅಂತ ತಿಳಿದುಕೊಳ್ಳಲು ಹಲವರಿಗೆ ಕುತೂಹಲ ಇದೆ. ಹಾಗಾದರೆ ಇಂದು ಇಂಧನ ದರ ಏರಿಕೆಯಾಗಿದೆಯಾ? ಅಥವಾ ಇಳಿಕೆಯಾಗಿದೆಯಾ ಅಂತ ಇಲ್ಲಿ ತಿಳಿಸಲಾಗಿದೆ.
ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ (ಜನವರಿ 10) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್ 4 ರಂದು ಇಂಧನ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ
ನಿಮ್ಮ ಮನೆಗೆ ಈ ವಸ್ತುಗಳನ್ನ ತಂದರೆ ಹೆಚ್ಚು ಆದಾಯ ಪಡೆಯುತ್ತೀರಿ
Analysis: ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಗೆಲುವಿಗೆ ಬರೆಯಲಿದೆಯೇ ಮುನ್ನುಡಿ?
Published On - 9:33 am, Mon, 10 January 22