AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Diesel Price Today, 11-01-2022: ಇಂದು ಸಹ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ.

Petrol Rate: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 11, 2022 | 7:56 AM

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಮಂಗಳವಾರ (ಜನವರಿ​ 11) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:52 am, Tue, 11 January 22

ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್