AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡೀಸೆಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ

Petrol Diesel Price Today, 12-01-2022: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. 

Petrol Rate: ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್, ಡೀಸೆಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 12, 2022 | 7:55 AM

Share

Petrol Diesel Price Today|ದೆಹಲಿ: ಇಂದು (ಜನವರಿ​ 12) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಇಂಧನ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತ ಕಾಣುತ್ತಲೇ ಇದೆ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:51 am, Wed, 12 January 22

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್