AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಎಷ್ಟಿದೆ ಮಹಾನಗರಗಳಲ್ಲಿ ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ದರ?

Petrol Diesel Price Today, 15-01-2022: ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್-ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

Petrol Rate: ಎಷ್ಟಿದೆ ಮಹಾನಗರಗಳಲ್ಲಿ ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ದರ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 15, 2022 | 8:01 AM

Share

Petrol Diesel Price Today|ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಜನವರಿ 15, ಶನಿವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ