AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಲೀಟರ್​ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ವಿವಿಧ ನಗರಗಳ ಇಂಧನ ದರ ಇಲ್ಲಿದೆ ನೋಡಿ

Petrol Diesel Price Today, 31-01-2022: ಇಂದು ಕೂಡ ಇಂಧನಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

Petrol Diesel Rate Today: ಲೀಟರ್​ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ವಿವಿಧ ನಗರಗಳ ಇಂಧನ ದರ ಇಲ್ಲಿದೆ ನೋಡಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jan 31, 2022 | 9:47 AM

Share

Petrol Diesel Price Today|ದೆಹಲಿ: 2021ರ ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಜನವರಿ 31, ಸೋಮವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನಗಳ ದರದಲ್ಲಿ (Fuel Price) ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:40 am, Mon, 31 January 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು