Petrol Diesel Rate Today: ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

Petrol Diesel Price Today, 06-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Diesel Rate Today: ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Mar 06, 2022 | 7:35 AM

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಆರಂಭವಾದ ಬಳಿಕ ತೈಲ ದರ ಏರಿಕೆಯ ಬಗ್ಗೆ ಬಹಳಷ್ಟು ಮಾತುಗಳು ಕೇಳಿಬರುತ್ತಿವೆ. ಆದರೆ, ಇಂದಿನವರೆಗೆ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಇಂದು (ಮಾರ್ಚ್  06, ಭಾನುವಾರ) ಕೂಡ ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ