AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಭಾರತದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ವಿವರ

Petrol Diesel Price Today, 07-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Diesel Rate Today: ಭಾರತದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Mar 07, 2022 | 6:58 AM

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ.  ಕೆಲಸ ಕಾರ್ಯಕ್ಕೆ ತೆರಳುವ ಬಹುತೇಕರು ಈಗ ಸ್ವಂತ ವಾಹನ ಅವಲಂಬಿಸಿ ಇರುತ್ತಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ ಎಂಬುದು ಎಲ್ಲರಿಗೂ ಕುತೂಹಲದ ವಿಷಯ ಆಗಿರುತ್ತದೆ. ಇಂದು (ಮಾರ್ಚ್  07, ಸೋಮವಾರ) ಕೂಡ ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ