Petrol Diesel Rate Today: ಬೆಂಗಳೂರು ಹಾಗೂ ಇತರ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Petrol Diesel Price Today, 13-03-2022: ರಷ್ಯಾ ಉಕ್ರೇನ್ ಯುದ್ಧ ಹಿನ್ನೆಲೆ ಹಾಗೂ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಇಂಧನ ದರಗಳಲ್ಲಿ ಏರಿಕೆ ಆಗುತ್ತದೆ ಎಂದು ಬಹಳಷ್ಟು ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಆದರೆ, ಇಂದಿನವರೆಗೂ ಇಂಧನ ದರ ಏರಿಕೆ ಕಂಡಿಲ್ಲ. 

Petrol Diesel Rate Today: ಬೆಂಗಳೂರು ಹಾಗೂ ಇತರ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 13, 2022 | 7:39 AM

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ರಷ್ಯಾ ಉಕ್ರೇನ್ ಯುದ್ಧ ಹಿನ್ನೆಲೆ ಹಾಗೂ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಇಂಧನ ದರಗಳಲ್ಲಿ ಏರಿಕೆ ಆಗುತ್ತದೆ ಎಂದು ಬಹಳಷ್ಟು ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಜನರ ಮಧ್ಯೆ, ಒಂದೇ ದಿನ 10-15 ರೂ. ಏರಿಕೆ ಎಂಬ ಬಗ್ಗೆಯೂ ಸುದ್ದಿ ಹಬ್ಬಿತ್ತು. ಆದರೆ, ಇಂದಿನವರೆಗೂ ಇಂಧನ ದರ ಏರಿಕೆ ಕಂಡಿಲ್ಲ. ಇಂದು (ಮಾರ್ಚ್  13, ಭಾನುವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:38 am, Sun, 13 March 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್