AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಮಾರ್ಚ್ 16ರ ಪೆಟ್ರೋಲ್, ಡೀಸೆಲ್ ಬೆಲೆ ಏನು? ದೇಶದ ವಿವಿಧ ನಗರಗಳ ಇಂಧನ ದರ ಇಲ್ಲಿ ತಿಳಿಯಿರಿ

Petrol Diesel Price Today, 16-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Rate Today: ಮಾರ್ಚ್ 16ರ ಪೆಟ್ರೋಲ್, ಡೀಸೆಲ್  ಬೆಲೆ ಏನು? ದೇಶದ ವಿವಿಧ ನಗರಗಳ ಇಂಧನ ದರ ಇಲ್ಲಿ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 16, 2022 | 7:40 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಇಂಧನ ದರದಲ್ಲಿ ಇಳಿಕೆ ಮಾಡಿದ ಬಳಿಕ ಕರ್ನಾಟಕ ಸಹಿತ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್​ ಇಳಿಕೆ ಮಾಡಿದವು. ಈ ಕಾರಣದಿಂದ ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದ್ದ ಇಂಧನ ದರ ಕಡಿಮೆ ಆಗಿತ್ತು. ಸದ್ಯ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಇದೆ. ಇಂದು (ಮಾರ್ಚ್  16, ಬುಧವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:40 am, Wed, 16 March 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ