AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಮಾರ್ಚ್ 18ರ ಪೆಟ್ರೋಲ್, ಡೀಸೆಲ್ ದರ ಎಷ್ಟು? ವಿವಿಧ ನಗರಗಳ ಇಂಧನ ದರ ತಿಳಿಯಿರಿ

Petrol Diesel Price Today, 18-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Rate Today: ಮಾರ್ಚ್ 18ರ ಪೆಟ್ರೋಲ್, ಡೀಸೆಲ್ ದರ ಎಷ್ಟು? ವಿವಿಧ ನಗರಗಳ ಇಂಧನ ದರ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 18, 2022 | 7:45 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಇಂಧನ ದರದಲ್ಲಿ ಇಳಿಕೆ ಮಾಡಿದ ಬಳಿಕ ಕರ್ನಾಟಕ ಸಹಿತ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್​ ಇಳಿಕೆ ಮಾಡಿದವು. ಆ ಬಳಿಕ ಸದ್ಯ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಇದೆ. ಇಂದು (ಮಾರ್ಚ್  18, ಶುಕ್ರವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!