Petrol Diesel Rate Today: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ಮಾಹಿತಿ

Petrol Diesel Price Today, 20-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Rate Today: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Edited By:

Updated on: Mar 20, 2022 | 7:52 AM

Petrol Diesel Price Today| ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಇಂಧನ ದರ ಇಳಿಕೆ ಮಾಡಿದ ಬಳಿಕ ಕರ್ನಾಟಕ ಸಹಿತ ಕೆಲವು ರಾಜ್ಯಗಳು ವ್ಯಾಟ್​ ಕಡಿತ ಮಾಡಿದ್ದವು. ಆ ನಂತರ ಸದ್ಯ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಉಂಟಾಗಿಲ್ಲ. ಉಕ್ರೇನ್ ರಷ್ಯಾ ಯುದ್ಧದ ಪರಿಣಾಮ ಇಂಧನ ದರ ಏರಿಕೆಯ ಸಾಧ್ಯತೆಗಳು ಇವೆ ಎಂದಾಗಿದ್ದರೂ ಇನ್ನೂ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು (ಮಾರ್ಚ್  20, ಭಾನುವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.59 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

Web contact

TV9 Kannada

Read More
Follow Us