AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 25 ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್ ​ದರ!

Petrol Rate Today: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ.

Petrol Price Today: ಸತತ 25 ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್ ​ದರ!
ಪಿಟಿಐ ಚಿತ್ರ
TV9 Web
| Edited By: |

Updated on: Aug 11, 2021 | 8:00 AM

Share

Petrol Diesel Rate Today | ದೆಹಲಿ: ಇಂದು ( ಆಗಸ್ಟ್ 11, ಬುಧವಾರ) ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸತತ 25 ದಿನಗಳಿಂದ ಇಂಧನ ದರ (Fuel Price) ಸ್ಥಿರವಾಗಿಯೇ ಉಳಿದಿದೆ. ಜುಲೈ ತಿಂಗಳಿನಲ್ಲಿ ಎರಡು ಬಾರಿ ಡೀಸೆಲ್ ದರವನ್ನು (Diesel Price) ಇಳಿಕೆ ಮಾಡಲಾಯಿತು. ಆ ಬಳಿಕ ಇನ್ನೇನು ಇಂಧನ ದರ ಇಳಿಕೆಯಾಗುತ್ತದೆ ಎಂಬ ನೀರಿಕ್ಷೆಯಲ್ಲಿದ್ದ ವಾಹನ ಸವಾರರಿಗೆ ನಿರಾಸೆಯಾಗಿದೆ. ಆದರೆ ದರ ಸ್ಥಿರವಾಗಿ ಉಳಿದಿರುವುದು ದರ ಏರಿಕೆಗಿಂತ ನಿರಾಳವಾಗಿದೆ ಎನ್ನುವುದು ಮಾತ್ರ ಸತ್ಯ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 89.87 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ಮುಂಬೈನಲ್ಲಿ ಇಂಧನ ದರ ಗರಿಷ್ಠ ಮಟ್ಟದಲ್ಲಿದಲ್ಲಿದೆ. ಲೀಟರ್ ಪೆಟ್ರೋಲ್​ಗೆ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 97.45 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 25 ದಿನಗಳಿಂದ ಇಂಧನ ದರ ಸ್ಥಿರವಾಗಿ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ