Petrol Price Today: ಇಂದು ಸಹ ಬದಲಾಗದ ಪೆಟ್ರೋಲ್, ಡೀಸೆಲ್ ದರ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ

ಕಳೆದ ಮೇ ತಿಂಗಳಿನಿಂದ ಇಂಧನ ದರ ಏರಲು ಪ್ರಾರಂಭಿಸಿತು. ಒಟ್ಟು 42 ದಿನಗಳಲ್ಲಿ 11 ರೂಪಾಯಿಯಷ್ಟು ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107. 83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ.

Petrol Price Today: ಇಂದು ಸಹ ಬದಲಾಗದ ಪೆಟ್ರೋಲ್, ಡೀಸೆಲ್ ದರ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ (ಪಿಟಿಐ ಚಿತ್ರ)
Follow us
TV9 Web
| Updated By: preethi shettigar

Updated on: Aug 14, 2021 | 8:00 AM

Petrol Diesel Price Today | ದೆಹಲಿ: ಸತತವಾಗಿ 28 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಇಂದು ( ಆಗಸ್ಟ್ 14, ಶನಿವಾರ) ಇಂಧನ ಬೆಲೆಯಲ್ಲಿ (Fuel Price) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜುಲೈ 17ನೇ ತಾರೀಕಿನಿಂದ ಸ್ಥಿರತೆಯಲ್ಲಿರುವ ತೈಲ ದರ ಇಂದಿನವರೆಗೂ ಯಥಾಸ್ಥಿತಿಯಲ್ಲಿಯೇ ಇದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 89.87 ರೂಪಾಯಿ ಇದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್ ದರದಲ್ಲಿ 11.52 ರೂಪಾಯಿ ಹೆಚ್ಚಳವಾಗಿದೆ.

ಕಳೆದ ಮೇ ತಿಂಗಳಿನಿಂದ ಇಂಧನ ದರ ಏರಲು ಪ್ರಾರಂಭಿಸಿತು. ಒಟ್ಟು 42 ದಿನಗಳಲ್ಲಿ 11 ರೂಪಾಯಿಯಷ್ಟು ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107. 83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ದರ 96.68 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.84 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಜುಲೈ ತಿಂಗಳಿನಲ್ಲಿ 2 ಬಾರಿ ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು. ಆ ಬಳಿಕ ಏರುತ್ತಲೇ ಇದ್ದ ಇಂಧನ ದರ ಇನ್ನೇನು ಇಳಿಕೆ ಕಾಣಬಹುದು ಎಂಬ ನಿರೀಕ್ಷೆಯಲ್ಲಿ ವಾಹನ ಸವಾರರಿದ್ದರು. ಆದರೆ ಆ ಬಳಿಕ ಪೆಟ್ರೋಲ್, ಡೀಸೆಲ್​ಗಳೆರಡರ ದರವೂ ಸ್ಥಿರತೆಯಲ್ಲಿಯೇ ಇದೆ. ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html