Petrol Diesel Price Today | ದೆಹಲಿ: ಸತತವಾಗಿ 29 ದಿನಗಳಿಂದ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು (ಆಗಸ್ಟ್ 15, ಭಾನುವಾರ) ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿ ಉಳಿದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಕಳೆದ 4 ವಾರಗಳಿಂದ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಇದೆ. ಲೀಟರ್ ಡೀಸೆಲ್ಅನ್ನು 97.45 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಕೊನೆಯ ಬಾರಿ ಮೇ 29 ನೇ ತಾರೀಕಿನಂದು ದರ ಏರಿಕೆಯತ್ತ ಸಾಗಿತು. ಬಳಿಕ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪ್ರಮುಖ ಮೆಟ್ರೋ ನಗರಗಳಲ್ಲಿಯೇ ಅತಿ ಹೆಚ್ಚು ಇಂಧನ ದರ ಹೊಂದಿರುವ ನಗರವಿದು.
ಕೋಲ್ಕತ್ತಾದಲ್ಲಿಯು ಸಹ ಪೆಟ್ರೋಲ್ ದರ ಬದಲಾಗಿಲ್ಲ. ಆ ಮೂಲಕ ಲೀಟರ್ ಪೆಟ್ರೋಲ್ ಬೆಲೆ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ.
ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಕಳೆದ ಜುಲೈ ತಿಂಗಳಿನಲ್ಲಿ 2 ಬಾರಿ ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು. ಆದರೆ ಪೆಟ್ರೋಲ್ ದರದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:08 am, Sun, 15 August 21