Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ!

Petrol Rate Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ!
ಸಾಂದರ್ಭಿಕ ಚಿತ್ರ
Edited By:

Updated on: Aug 16, 2021 | 8:16 AM

Petrol Diesel Price Today | ಸತತವಾಗಿ 30 ದಿನಗಳಿಂದ ಇಂಧನ ದರ (Fuel Price) ಸ್ಥಿರವಾಗಿಯೇ ಇದೆ. ಕಳೆದ ಜುಲೈ ತಿಂಗಳಿನಲ್ಲಿ ಡೀಸೆಲ್ ಬೆಲೆ 2 ಬಾರಿ ಇಳಿಕೆ ಕಂಡಿತ್ತು. ಆ ಬಳಿಕ ದಿನ ಸಾಗಿದಂತೆ ಪೆಟ್ರೋಲ್​ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಇಳಿಕೆಯತ್ತ ಸಾಗಬಹುದು ಎಂಬ ನಿರೀಕ್ಷೆ ವಾಹನ ಸವಾರರಲ್ಲಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು (ಆಗಸ್ಟ್​ 16, ಸೋಮವಾರ) ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಏರುತ್ತಲೇ ಇದ್ದ ತೈಲ ದರ ನೋಡಿ ನೋಡಿ ಗ್ರಾಹಕರು ಬೇಸತ್ತಿದ್ದರು. ಸದ್ಯ! ಇಳಿಕೆಯತ್ತ ಸಾಗದಿದ್ದರೂ ದರ ಏರಿಕೆಯಾಗದೇ ಸ್ಥಿರವಾಗಿದೆ ಎಂಬುದು ಗ್ರಾಹಕರಿಗೆ ಸಮಾಧಾನ ತಂದಿರುವ ವಿಚಾರ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ಅನ್ನು 97.45 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 8:10 am, Mon, 16 August 21

Web contact

TV9 Kannada

Read More
Follow Us