Petrol Price Today: ಒಂದು ತಿಂಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

| Updated By: shruti hegde

Updated on: Aug 17, 2021 | 8:23 AM

Petrol Price Today: ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಳಿಕೆಯ ಹಾದಿ ಹಿಡಿಯುತ್ತದೆ ಎಂಬ ನಿರೀಕ್ಷೆ ಗ್ರಾಹಕರಲ್ಲಿತ್ತು. ಆದರೆ ಇಂಧನ ಬೆಲೆ ಇಳಿಕೆಯ ಹಾದಿ ಹಿಡಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ, ಒಂದು ತಿಂಗಳಿಂದ ತೈಲ ಬೆಲೆ ಸ್ಥಿರವಾಗಿಯೇ ಉಳಿದಿದೆ.

Petrol Price Today: ಒಂದು ತಿಂಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
Follow us on

Petrol Diesel Price Today | ದೆಹಲಿ: ಸತತವಾಗಿ 31 ದಿನಗಳಿಂದ ಇಂಧನ ದರ ಸ್ಥಿರತೆಯಲ್ಲಿಯೇ ಇದೆ. ಯಾವ ನಗರದಲ್ಲಿಯೂ ಬದಲಾವಣೆಗಳಾಗಿಲ್ಲ. ಸರ್ಕಾರಿ ತೈಲ ಕಂಪನಿಗಳು ಇಂದು ( ಆಗಸ್ಟ್​ 17, ಮಂಗಳವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಜುಲೈ ತಿಂಗಳಿನಲ್ಲಿ 2 ಬಾರಿ ಡೀಸೆಲ್​ ದರ ಇಳಿಕೆಯಾಗಿದೆ. ಇನ್ನೇನು ಪೆಟ್ರೋಲ್​ (Petrol Price) ಮತ್ತು ಡೀಸೆಲ್​ ಬೆಲೆ (Diesel Price) ಇಳಿಕೆಯ ಹಾದಿ ಹಿಡಿಯುತ್ತದೆ ಎಂಬ ನಿರೀಕ್ಷೆ ಗ್ರಾಹಕರಲ್ಲಿತ್ತು. ಆದರೆ ಇಂಧನ ಬೆಲೆ (Fuel Price) ಇಳಿಕೆಯ ಹಾದಿ ಹಿಡಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ, ಒಂದು ತಿಂಗಳಿಂದ ತೈಲ ಬೆಲೆ ಸ್ಥಿರವಾಗಿಯೇ ಉಳಿದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮೇ ತಿಂಗಳಿನಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ಬಳಿಕ ಇಳಿಕೆಯತ್ತ ಸಾಗಿಲ್ಲ. ಸತತವಾಗಿ 31 ದಿನಗಳಿಂದ ಸ್ಥಿರವಾಗಿಯೇ ಉಳಿದಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ಅನ್ನು 97.45 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುತ್ತದೆಯೇ ಎಂಬ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಕಡಿಮೆ ಮಾಡಿದ್ದರೆ ಬೆಲೆಯನ್ನು ಈಗ ನರೇಂದ್ರ ಮೋದಿ ಸರ್ಕಾರವು ಪಾವತಿಸುತ್ತಿದೆ. ಏಕೆಂದರೆ ಆ ಅವಧಿಯ ತೈಲ ಬಾಂಡ್‌ಗಳ (Oil Bonds) ಮೇಲಿನ ಬಡ್ಡಿ ಮತ್ತು ಅಸಲು ಮೊತ್ತವನ್ನು ಮರುಪಾವತಿ ಮಾಡಬೇಕಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 8:14 am, Tue, 17 August 21