AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಸತತ 2ನೇ ದಿನ ಇಳಿಕೆ ಕಂಡ ಡೀಸೆಲ್​ ದರ; ಪೆಟ್ರೋಲ್​ ಬೆಲೆ ಸ್ಥಿರ!

Petrol Rate Today: ಸತತವಾಗಿ 33 ದಿನಗಳಿಂದ ಪೆಟ್ರೋಲ್​ ದರ ಸ್ಥಿರವಾಗಿಯೇ ಉಳಿದಿದೆ. ಇಂದು ಲೀಟರ್​ ಡೀಸೆಲ್​ ಬೆಲೆಯಲ್ಲಿ 2) ರಿಂದ 25 ಪೈಸೆ ಕಡಿತಗೊಳಿಸಲಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಪರಿಶೀಲಿಸಿ.

Petrol Diesel Price Today: ಸತತ 2ನೇ ದಿನ ಇಳಿಕೆ ಕಂಡ ಡೀಸೆಲ್​ ದರ; ಪೆಟ್ರೋಲ್​ ಬೆಲೆ ಸ್ಥಿರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 19, 2021 | 8:24 AM

Share

Petrol Diesel Price Today | ದೆಹಲಿ: ಸತತವಾಗಿ 2ನೇ ದಿನವೂ ಡೀಸೆಲ್​ ದರ ಇಳಿಕೆ ಕಂಡಿದೆ. ನಿನ್ನೆ ಕೂಡಾ ಡೀಸೆಲ್​ ದರವನ್ನು (Diesel Price) 20 ಪೈಸೆ ಇಳಿಕೆ ಮಾಡಲಾಯಿತು. ಆ ನಂತರ ಇಂದು ಸಹ ( ಆಗಸ್ಟ್​ 19, ಗುರವಾರ) ಡೀಸೆಲ್​ ದರದಲ್ಲಿ ಇಳಿಕೆ ಕಂಡು ಬಂದಿದೆ. ಆದರೆ ಪೆಟ್ರೋಲ್​ ಬೆಲೆಯಲ್ಲಿ (Petrol Price) ಯಾವುದೇ ಏರಿಳಿತ ಕಂಡಿಲ್ಲ. ಸತತವಾಗಿ 33 ದಿನಗಳಿಂದ ಪೆಟ್ರೋಲ್​ ದರ ಸ್ಥಿರವಾಗಿಯೇ ಉಳಿದಿದೆ. ಇಂದು ಲೀಟರ್​ ಡೀಸೆಲ್​ ಬೆಲೆಯಲ್ಲಿ 20 ರಿಂದ 25 ಪೈಸೆ ಕಡಿತಗೊಳಿಸಲಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಎಷ್ಟಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ. ಹಾಗೆಯೇ ಡೀಸೆಲ್ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಲೀಟರ್​ಗೆ 89.47 ರೂಪಾಯಿಗೆ ಇಳಿಕೆ ಆಗಿದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.04 ರೂಪಾಯಿಗೆ ಇಳಿಕೆ ಆಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರದಲ್ಲಿ 25 ಪೈಸೆ ಇಳಿಕೆ ಕಂಡು ಬಂದಿದ್ದು 89.67 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.47 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 18 ಪೈಸೆ ಇಳಿಕೆ ಬಳಿಕ 94.02 ರೂಪಾಯಿಗೆ ಇಳಿಕೆಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 98.26 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.53 ರೂಪಾಯಿಗೆ ಇಳಿಕೆಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 94.86 ರೂಪಾಯಿಗೆ ಇಳಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:11 am, Thu, 19 August 21

Follow Us
TV9 Web
TV9 Web

TV9 Kannada

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್