Petrol Price Today: ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಪರಿಶೀಲಿಸಿ

Petrol Rate Today: ಮೇ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಯಿತು. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 06, 2021 | 8:07 AM

Petrol Diesel Rate Today | ದೆಹಲಿ: ಇಂದು ( ಆಗಸ್ಟ್ 6, ಶುಕ್ರವಾರ) ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸತತ 20 ದಿನಗಳಿಂದ ಇಂಧನ ದರ (Fuel Price) ಸ್ಥಿರವಾಗಿಯೇ ಉಳಿದಿದೆ. ಜುಲೈ ತಿಂಗಳಿನಲ್ಲಿ ಎರಡು ಬಾರಿ ಡೀಸೆಲ್ ದರವನ್ನು (Diesel Price) ಇಳಿಕೆ ಮಾಡಲಾಯಿತು. ಆ ಬಳಿಕ ಇನ್ನೇನು ಇಂಧನ ದರ ಇಳಿಕೆಯಾಗುತ್ತದೆ ಎಂಬ ನೀರಿಕ್ಷೆಯಲ್ಲಿ ವಾಹನ ಸವಾರರಿದ್ದರು. ಆದರೆ ದರ ಸ್ಥಿರವಾಗಿ ಉಳಿದಿದೆಯೇ ಹೊರತು, ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.

ಮೇ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಯಿತು. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.83 ಹಾಗೂ ಲೀಟರ್ ಡೀಸೆಲ್​ಗೆ 97.45 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 20 ದಿನಗಳಿಂದ ಇಂಧನ ದರ ಸ್ಥಿರವಾಗಿ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ