AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್ ಮತ್ತು ಡೀಸೆಲ್ ದರ; ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು?

Petrol Rate Today: ಮೇ 01 ರಿಂದ, ಪೆಟ್ರೋಲ್ ಬೆಲೆ 41 ದಿನಗಳವರೆಗೆ ಹೆಚ್ಚಾಗಿದೆ, ರಾಜಧಾನಿ ದೆಹಲಿಯಲ್ಲಿ, ಈ 41 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 11.44 ರೂಪಾಯಿವರೆಗೆ ಏರಿಕೆಯಾಗಿತ್ತು.

Petrol Price Today: ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್ ಮತ್ತು ಡೀಸೆಲ್ ದರ; ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 07, 2021 | 7:36 AM

Share

Petrol Diesel Rate Today | ದೆಹಲಿ: ಇಂದು ( ಆಗಸ್ಟ್ 7, ಶನಿವಾರ) ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸತತ 21 ದಿನಗಳಿಂದ ಇಂಧನ ದರ (Fuel Price) ಸ್ಥಿರವಾಗಿಯೇ ಉಳಿದಿದೆ. ಜುಲೈ ತಿಂಗಳಿನಲ್ಲಿ ಎರಡು ಬಾರಿ ಡೀಸೆಲ್ ದರವನ್ನು (Diesel Price) ಇಳಿಕೆ ಮಾಡಲಾಯಿತು. ಆ ಬಳಿಕ ಇನ್ನೇನು ಇಂಧನ ದರ ಇಳಿಕೆಯಾಗುತ್ತದೆ ಎಂಬ ನೀರಿಕ್ಷೆಯಲ್ಲಿ ವಾಹನ ಸವಾರರಿದ್ದರು. ಆದರೆ ದರ ಸ್ಥಿರವಾಗಿ ಉಳಿದಿದೆಯೇ ಹೊರತು, ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಅದಾಗ್ಯೂ ಈ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಬಾರಿಯಾಗಿಲ್ಲ ಎನ್ನುವುದು ವಾಹನ ಸವಾರರಿಗೆ ಕೊಂಚ ಸಮಾಧಾನ ತಂದಿದೆ.

ಮೇ ತಿಂಗಳಿನಿಂದ ಪೆಟ್ರೋಲ್ ಬೆಲೆಯಲ್ಲಿ ಎಷ್ಟು ಹೆಚ್ಚಳವಾಗಿದೆ? ಮೇ 01 ರಿಂದ, ಪೆಟ್ರೋಲ್ ಬೆಲೆ 41 ದಿನಗಳವರೆಗೆ ಹೆಚ್ಚಾಗಿದೆ, ರಾಜಧಾನಿ ದೆಹಲಿಯಲ್ಲಿ, ಈ 41 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 11.44 ರೂಪಾಯಿವರೆಗೆ ಏರಿಕೆಯಾಗಿತ್ತು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಇತ್ತೀಚಿನ ನವೀಕರಣ ಆಗಸ್ಟ್ ತಿಂಗಳಲ್ಲಿ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗುವ ನಿರೀಕ್ಷೆಯಿಲ್ಲ ಎಂದು ತಜ್ಞರು ನಂಬಿದ್ದಾರೆ. ಇಂದು ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 101.84 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 89.87 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 107.83 ರೂಪಾಯಿ ಮತ್ತು ಡೀಸೆಲ್ ಬೆಲೆ 97.45 ರೂ. ಆಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 20 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:33 am, Sat, 7 August 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ