AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 23 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today (August 9) : ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂ. ಮತ್ತು ಡೀಸೆಲ್ ಲೀಟರ್​ಗೆ  95.26 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Petrol Price Today: ಸತತ 23 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 09, 2021 | 7:58 AM

Share

Petrol Diesel Rate Today | ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು (ಆಗಸ್ಟ್ 9, ಸೋಮವಾರ) ಕೂಡ ಯಾವುದೇ ಬದಲಾವಣೆ ಕಂಡಿಲ್ಲ. ಸತತ 23 ದಿನಗಳ ಕಾಲ ಇಂಧನ ದರ (Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ. ಆ ಕಾರಣ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ.

ದೇಶದ ಪ್ರಮುಖ 4 ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆ ಮಟ್ಟದಲ್ಲಿವೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101.84 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 89.87 ರೂಪಾಯಿಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್​ಗೆ 107.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್​ಗೆ 97.45 ರೂಪಾಯಿಯಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.49 ರೂ. ಮತ್ತು ಡೀಸೆಲ್ ಲೀಟರ್​ಗೆ 94.39 ರೂ. ಅದೇ ಸಮಯದಲ್ಲಿ, ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂ. ಮತ್ತು ಡೀಸೆಲ್ ಲೀಟರ್​ಗೆ  95.26 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ.ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 23 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:56 am, Mon, 9 August 21

Follow Us
Web contact
Web contact

TV9 Kannada

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು