AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ನಾಲ್ಕು ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್​, ಡೀಸೆಲ್​ ದರ!

Petrol Rate Today: ಮೇ ತಿಂಗಳಿಂದ ಏರಿಕೆ ಕಾಣುತ್ತಿರುವ ಡೀಸೆಲ್​ ದರ ಮೊದಲ ಬಾರಿಗೆ ಇಳಿಕೆ ಕಂಡಿತ್ತು. ಇನ್ನೇನು ಇಳಿಕೆಯ ಹಾದಿ ಹಿಡಿಯುತ್ತದೆ ಅನ್ನುವಷ್ಟರಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿದು ಸಾಗಲಾರಂಭಿಸಿತು. ಇದೀಗ ನಾಲ್ಕು ದಿನಗಳ ಕಾಲ ಇಂಧನ ದರ ಸ್ಥಿರತೆಯಲ್ಲಿರುವುದು ವಾಹನ ಸವಾರರಿಗೆ ಕೊಂಚ ಸಮಾಧಾನ ತರುವ ವಿಚಾರ.

Petrol Price Today: ಸತತ ನಾಲ್ಕು ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್​, ಡೀಸೆಲ್​ ದರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 21, 2021 | 8:32 AM

Share

Petrol Diesel Price Today | ಸತತ ನಾಲ್ಕು ದಿನಗಳಿಮದ ಪೆಟ್ರೋಲ್​, ಡೀಸೆಲ್​ ದರ ಸ್ಥಿರತೆಯಲ್ಲಿದೆ. ಇಂದು (ಜುಲೈ 21, ಬುಧವಾರ) ಪೆಟ್ರೋಲ್​(Petrol Price) ಮತ್ತು ಡೀಸೆಲ್ ದರದಲ್ಲಿ(Diesel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಜುಲೈ ತಿಂಗಳ ಪ್ರಾರಂಭದಲ್ಲಿ ಎರಡು ಬಾರಿ ಡೀಸೆಲ್​ ದರ ಒಳಿಕೆ ಕಂಡಿತ್ತು. ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.87 ರೂಪಾಯಿ ಇದೆ. ಅದೇ ದರವನ್ನು ಮೂರು ದಿನಗಳಿಂದ ಕಾಯ್ದುಕೊಂಡು ಬಂದಿದೆ.

ಮೇ ತಿಂಗಳಿಂದ ಏರಿಕೆ ಕಾಣುತ್ತಿರುವ ಡೀಸೆಲ್​ ದರ ಮೊದಲ ಬಾರಿಗೆ ಇಳಿಕೆ ಕಂಡಿತ್ತು. ಇನ್ನೇನು ಇಳಿಕೆಯ ಹಾದಿ ಹಿಡಿಯುತ್ತದೆ ಅನ್ನುವಷ್ಟರಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿದು ಸಾಗಲಾರಂಭಿಸಿತು. ಇದೀಗ ನಾಲ್ಕು ದಿನಗಳ ಕಾಲ ಇಂಧನ ದರ ಸ್ಥಿರತೆಯಲ್ಲಿರುವುದು ವಾಹನ ಸವಾರರಿಗೆ ಕೊಂಚ ಸಮಾಧಾನ ತರುವ ವಿಚಾರ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್ ದರ 107.83 ರೂಪಾಯಿ ಇದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 97.45 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಇದೆ ಹಾಗೂ ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೊಲ್​ ಬೆಲೆ 102.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 90.26 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್​ ಪೆಟ್ರೋಲ್​ ದರ 97.93 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 89.50 ರೂಪಾಯಿ ಆಗಿದೆ.

ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol price unchanged today on 2021 july 21 check diesel rate in Bangalore Delhi Chennai Mumbai and major city)

Published On - 8:21 am, Wed, 21 July 21

Follow Us
TV9 Web
TV9 Web

TV9 Kannada

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ