AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಸತತ 5 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಈಗಾಗಲೇ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಪೆಟ್ರೋಲ್​ ಮತ್ತು ಡೀಸೆಲ್​ ದರ ಗರಿಷ್ಟ ಮಟ್ಟ ತಲುಪಿದೆ. ಆ ಬಳಿಕವೂ ದರ ಏರುತ್ತಲೇ ಇತ್ತು. ಸದ್ಯ! ಈ ಐದು ದಿನಗಳ ಕಾಲ ಇಂಧನ ದರ ಬದಲಾಗಿಲ್ಲ ಎಂದು ಹೇಳುತ್ತಿದ್ದಾರೆ. ಜುಲೈ 18ರಂದು ಪೆಟ್ರೋಲ್​ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ಗೆ 102 ರೂಪಾಯಿ ಆಗಿದೆ.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಸತತ 5 ದಿನಗಳಿಂದ ಇಂಧನ ದರ ಸ್ಥಿರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 22, 2021 | 8:21 AM

Share

Petrol Diesel Price Today | ದೆಹಲಿ: ಏರುತ್ತಲೇ ಇರುವ ಪೆಟ್ರೋಲ್​(Petrol Price) ಡೀಸೆಲ್​ ಬೆಲೆಯನ್ನು ಗಮನಿಸುತ್ತಿದ್ದ ವಾಹನ ಸವಾರರು ಬೇಸತ್ತಿದ್ದರು. ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಅವರ ಪ್ರಶ್ನೆ ಆಗಿತ್ತು. ಜುಲೈ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಎರಡು ಬಾರು ಡೀಸೆಲ್ ದರ(Diesel Price) ಇಳಿಕೆಯತ್ತ ಸಾಗಿದೆ ಅನಿಸಿದರೂ ಪುನಃ ಏರಿಕೆ ಕಂಡಿತು. ಆ ನಂತರ ಸತತ ಐದು ದಿನಗಳ ಕಾಲ ಇಂಧನ ದರ(Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇದು ವಾಹನ ಸವಾರರಿಗೆ ಸ್ವಲ್ಪ ಸಮಾಧಾನ ತಂದಿರುವ ವಿಚಾರ.

ಈಗಾಗಲೇ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಪೆಟ್ರೋಲ್​ ಮತ್ತು ಡೀಸೆಲ್​ ದರ ಗರಿಷ್ಟ ಮಟ್ಟ ತಲುಪಿದೆ. ಆ ಬಳಿಕವೂ ದರ ಏರುತ್ತಲೇ ಇತ್ತು. ಸದ್ಯ! ಈ ಐದು ದಿನಗಳ ಕಾಲ ಇಂಧನ ದರ ಬದಲಾಗಿಲ್ಲ ಎಂದು ಹೇಳುತ್ತಿದ್ದಾರೆ. ಜುಲೈ 18ರಂದು ಪೆಟ್ರೋಲ್​ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ಗೆ 102 ರೂಪಾಯಿ ಆಗಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.84 ರೂಪಾಯಿ ಇದೆ. ಲೀಟರ್​ ಡಿಸೆಲ್​ ದರ 89.87 ರೂಪಾಯಿ ಇದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 97.45 ರೂಪಾಯಿ ಇದೆ. ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಅತಿ ಗರಿಷ್ಟ ಮಟ್ಟದಲ್ಲಿ ಪೆಟ್ರೋಲ್​ ದರ ಹೊಂದಿರುವ ನಗರ ಮುಂಬೈ. ಮೇ 29ರಂದು ಲೀಟರ್ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.49 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol price unchanged today on 2021 july 22 check diesel rate in Bangalore Delhi Chennai Mumbai and major city)

Published On - 8:20 am, Thu, 22 July 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?