AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 7 ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್​ ದರ!

Petrol Rate Today: ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತದ ನಡುವೆ, ದೇಶೀಯ ತೈಲ ಕಂಪನಿಗಳು ಇಂಧನದ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುತ್ತಿಲ್ಲ.

Petrol Price Today: ಸತತ 7 ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್​ ದರ!
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 24, 2021 | 7:58 AM

Share

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು (ಜುಲೈ 24 , ಶನಿವಾರ) ಕೂಡ ಪೆಟ್ರೋಲ್ ​(Petrol Price) ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಹೀಗಾಗಿ ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತದ ನಡುವೆ, ದೇಶೀಯ ತೈಲ ಕಂಪನಿಗಳು ಇಂಧನದ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುತ್ತಿಲ್ಲ. ಕಚ್ಚಾ ತೈಲ ಬೆಲೆಗಳ ಇಳಿಮುಖ ಪ್ರವೃತ್ತಿ ಮುಂದುವರಿದರೆ, ಸಾಮಾನ್ಯ ಜನರು ಇಂಧನದ ಬೆಲೆಯಲ್ಲಿ(Fuel Price) ದೊಡ್ಡ ಪರಿಹಾರವನ್ನು ಕಾಣಬಹುದು ಎಂದು ನಂಬಲಾಗಿತ್ತು. ಆದಾಗ್ಯೂ, ದೇಶಾದ್ಯಂತ ಇಂಧನ ಬೆಲೆಗಳು ಇನ್ನೂ ದಾಖಲೆಯ ಮಟ್ಟದಲ್ಲಿಯೇ ಉಳಿದಿವೆ.

ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಲ್ಲಿದೆ? ದೇಶಾದ್ಯಂತ ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರಾಜಸ್ಥಾನದ ಗಂಗನಗರ ಮತ್ತು ಮಧ್ಯಪ್ರದೇಶದ ಅನುಪ್ಪೂರಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಗಂಗನಗರದಲ್ಲಿ ಪೆಟ್ರೋಲ್ ಬೆಲೆ 113.21 ರೂ. ಮತ್ತು ಡೀಸೆಲ್ 103.15 ರೂಪಾಯಿಯಾಗಿದೆ. ಅದೇ ಸಮಯದಲ್ಲಿ, ಅನುಪ್ಪೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 112.78 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 101.15 ರೂಪಾಯಿಯಾಗಿದೆ.

ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 101.84 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 89.87 ರೂಪಾಯಿಯಾಗಿದೆ, ಮುಂಬೈಯಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 107.83 ರೂ. ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 97.45 ರೂಪಾಯಿ ಆಗಿದೆ, ಕೋಲ್ಕತಾದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 102.08 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 93.02 ರೂಪಾಯಿಯಾಗಿದೆ, ಚೆನ್ನೈನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 102.49 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 94.39 ರೂಪಾಯಿಯಾಗಿದೆ, ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 105.25 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 95.26 ರೂಪಾಯಿಯಾಗಿದೆ.

ನೋಯ್ಡಾದಲ್ಲಿ ಇಂದು ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 99.02 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 90.34 ರೂಪಾಯಿಯಾಗಿದೆ, ಹೈದರಾಬಾದ್​ನಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 105.83 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 97.96 ರೂಪಾಯಿಯಾಗಿದೆ, ಪಾಟ್ನಾದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 104.25 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 95.51 ರೂಪಾಯಿಯಾಗಿದೆ, ಜೈಪುರದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 108.71 ರೂಪಾಯಿ ಮತ್ತು ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 99.02 ರೂಪಾಯಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol price unchanged today on 2021 july 24 check diesel rate in Bangalore Delhi Chennai Mumbai and major city )

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ