AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 10ನೇ ದಿನವೂ ಬದಲಾಗಲಿಲ್ಲ ಪೆಟ್ರೋಲ್, ಡೀಸೆಲ್​ ಬೆಲೆ! ಪ್ರಮುಖ ಮಹಾನಗರಗಳಲ್ಲಿ ಇಂಧನ ದರ ಸ್ಥಿರ

Petrol Diesel Rate Today: ಮೇ ತಿಂಗಳಿನಿಂದ ಏರಿಕೆಯತ್ತ ಸಾಗಲು ಪ್ರಾರಂಭಿಸಿದ ತೈಲ ದರ ಇಲ್ಲಿಯವರೆಗೆ 11.52 ರೂಪಾಯಿ ಏರಿಕೆ ಆಗಿದೆ. ಪೆಟ್ರೋಲ್​ ಈ ವರ್ಷ  63 ಬಾರಿ ಹೆಚ್ಚಳಗೊಂಡಿದೆ.

Petrol Price Today: ಸತತ 10ನೇ ದಿನವೂ ಬದಲಾಗಲಿಲ್ಲ ಪೆಟ್ರೋಲ್, ಡೀಸೆಲ್​ ಬೆಲೆ! ಪ್ರಮುಖ ಮಹಾನಗರಗಳಲ್ಲಿ ಇಂಧನ ದರ ಸ್ಥಿರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 27, 2021 | 8:28 AM

Share

Petrol Diesel Price Today | ಸತತ ಹತ್ತು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ( ಜುಲೈ 27, ಮಂಗಳವಾರ) ಇಂಧನ ದರದಲ್ಲಿ(Fuel Price) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಎಲ್ಲಾ ಮಹಾನಗರಗಳಲ್ಲಿಯೂ ಇಂದು ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರ (Diesel Price) ಬದಲಾಗದೇ ಹಾಗೆಯೇ ಉಳಿದಿದೆ. ಮೇ ತಿಂಗಳಿನಿಂದ ಏರಿಕೆಯತ್ತ ಸಾಗಲು ಪ್ರಾರಂಭಿಸಿದ ತೈಲ ದರ ಇಲ್ಲಿಯವರೆಗೆ 11.52 ರೂಪಾಯಿ ಏರಿಕೆ ಆಗಿದೆ. ಪೆಟ್ರೋಲ್​ ಈ ವರ್ಷ  63 ಬಾರಿ ಹೆಚ್ಚಳಗೊಂಡಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.83 ರೂ. ಹಾಗೂ ಲೀಟರ್ ಡೀಸೆಲ್​ಗೆ 97.45 ರೂ. ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಚೆನ್ನೈನಲ್ಲಿ ಲೀ. ಪೆಟ್ರೋಲ್ ದರ 101.49 ರೂ. ಹಾಗೂ ಲೀ. ಡೀಸೆಲ್ ದರ 94.39 ರೂ. ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂ. ಹಾಗೂ ಲೀಟರ್ ಡೀಸೆಲ್ ದರ 93.02 ರೂ. ಆಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂ. ಹಾಗೂ ಲೀಟರ್ ಡೀಸೆಲ್ ದರ 98. 67 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂ. ಹಾಗೂ ಲೀಟರ್ ಡೀಸೆಲ್ ದರ 95.26 ರೂ. ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂ. ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ದರ ಏರುತ್ತಿದ್ದುದನ್ನೇ ನೋಡುತ್ತಿದ್ದ ಗ್ರಾಹಕರು ಕೊಂಚ ಸಮಾಧಾನವಾಗಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್​ ದರ ಗರಿಷ್ಟ ಮಟ್ಟದಲ್ಲಿದೆ, ಸದ್ಯ.. ಇಂಧನ ದರ ಮತ್ತೂ ಏರಿಕೆ ಆಗಿಲ್ಲವಲ್ಲ ಎಂಬುದೇ ವಾಹನ ಸವಾರರ ಅಭಿಪ್ರಾಯ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:24 am, Tue, 27 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ