Petrol Price Today: ಸತತ 14 ದಿನಗಳಿಂದ ಸ್ಥಿರತೆಯಲ್ಲಿದೆ ಪೆಟ್ರೋಲ್, ಡೀಸೆಲ್ ದರ!
Petrol Rate Today: ಸತತ 14 ದಿನಗಳಿಂದ ಇಂಧನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜುಲೈ ತಿಂಗಳ 17ನೇ ತಾರೀಕಿನಂದು ಕೊನೆಯ ಬಾರಿಗೆ ತೈಲ ದರ ಏರಿಕೆ ಕಂಡಿತ್ತು. ಆ ಬಳಿಕ ಪೆಟ್ರೋಲ್ , ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಜುಲೈ 31, ಶನಿವಾರ) ಕೂಡ ಯಾವುದೇ ಬದಲಾವಣೆ ಮಾಡಿಲ್ಲ. ಸತತ 14 ದಿನಗಳಿಂದ ಇಂಧನದ ದರ (Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜುಲೈ ತಿಂಗಳ 17ನೇ ತಾರೀಕಿನಂದು ಕೊನೆಯ ಬಾರಿಗೆ ತೈಲ ದರ ಏರಿಕೆ ಕಂಡಿತ್ತು. ಆ ಬಳಿಕ ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ (Diesel Price) ಯಾವುದೇ ಏರಿಳಿತ ಕಂಡು ಬಂದಿಲ್ಲ.
ಎಲ್ಲಾ ಪ್ರಮುಖ ನಗರಗಳಲ್ಲಿಯೂ 14 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಜುಲೈ ತಿಂಗಳಿನಲ್ಲಿ ಎರಡು ಬಾರಿ ಇಂಧನ ದರವನ್ನು ಇಳಿಕೆ ಮಾಡಲಾಯಿತು. ಆ ಮೂಲಕ ಇನ್ನೇನು ದಿನ ಕಳೆದಂತೆ ಪೆಟ್ರೋಲ್, ಡೀಸೆಲ್ ದರ ಇಳಿಕೆಯತ್ತ ಸಾಗುತ್ತದೆ ಎಂದು ವಾಹನ ಸವಾರರು ನಿರೀಕ್ಷೆಯಲ್ಲಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಏರಿಕೆಯತ್ತ ಸಾಗದೇ ಸ್ಥಿರತೆಯಲ್ಲಿರುವುದು ಕೊಂಚ ಸಮಾಧಾನದ ವಿಷಯ ಎಂದು ಗ್ರಾಹಕರು ಮಾತನಾಡಿಕೊಳ್ಳುತ್ತಿದ್ದಾರೆ.
ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಕೂಡ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.84 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.87 ರೂಪಾಯಿಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 107.83 ರೂ. ಮತ್ತು ಡೀಸೆಲ್ 97.45 ರೂಪಾಯಿಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 102.08 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 93.02 ರೂಪಾಯಿಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 102.49 ರೂ. ಮತ್ತು ಡೀಸೆಲ್ ಬೆಲೆ 94.39 ರೂಪಾಯಿಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.25 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 95.26 ರೂಪಾಯಿಯಾಗಿದೆ.
ಆಗಸ್ಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಅಗ್ಗವಾಗುತ್ತದೆಯೇ? ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಮತ್ತೊಮ್ಮೆ ಆರಂಭವಾಗುವುದರಿಂದ, ಮುಂದಿನ ದಿನಗಳಲ್ಲಿ ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ ಕಡಿಮೆ. ಅದಾಗ್ಯೂ, ಜುಲೈ ಆರಂಭದಲ್ಲಿ ಅನೇಕ ತಜ್ಞರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಬಹುದು ಎಂದು ಹೇಳಿದ್ದರು. ಆದರೆ ಆ ಸಮಯದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಈ ಪ್ರವೃತ್ತಿ ಕಳೆದ ಕೆಲವು ವಾರಗಳಲ್ಲಿ ಬದಲಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html