Petrol Price Today: ಸೆಪ್ಟೆಂಬರ್ ತಿಂಗಳ ಆರಂಭದಿಂದ ಇಲ್ಲಿಯವರೆಗೆ 2 ಬಾರಿ ಇಳಿಕೆ ಕಂಡ ಪೆಟ್ರೋಲ್, ಡೀಸೆಲ್ ದರ!

Petrol Rate Today: ಸೆಪ್ಟೆಂಬರ್ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು ಎರಡು ಬಾರಿ ಇಳಿಕೆ ಮಾಡಲಾಗಿದೆ. ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಇದೆ.

Petrol Price Today: ಸೆಪ್ಟೆಂಬರ್ ತಿಂಗಳ ಆರಂಭದಿಂದ ಇಲ್ಲಿಯವರೆಗೆ 2 ಬಾರಿ ಇಳಿಕೆ ಕಂಡ ಪೆಟ್ರೋಲ್, ಡೀಸೆಲ್ ದರ!
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಕಳೆದ ಕೆಲವು ದಿನಗಳಿಂದಲೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ (Fuel Price) ಸ್ಥಿರವಾಗಿಯೇ ಇದೆ. ಹಾಗೆಯೇ ಇಂದು ಸಹ ( ಸೆಪ್ಟೆಂಬರ್ 12, ಭಾನುವಾರ) ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆಗಳಿಲ್ಲ. ಸೆಪ್ಟೆಂಬರ್ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು ಎರಡು ಬಾರಿ ಇಳಿಕೆ ಮಾಡಲಾಗಿದೆ.

ಸೆಪ್ಟೆಂಬರ್ 1ನೇ ತಾರೀಕಿನಂದು ಇಂಧನ ದರವನ್ನು ಕಡಿತಗೊಳಿಸಲಾಗಿದೆ. ಬಳಿಕ 5ನೇ ತಾರೀಕಿನಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಯಿತು. ಆ ಸಮಯದಲ್ಲಿ ಲೀಟರ್ ಪೆಟ್ರೋಲ್ ಬೆಲೆ 10 ರಿಂದ 15 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 15 ಪೈಸೆ ಇಳಿಕೆ ಮಾಡಲಾಗಿತ್ತು. ಒಟ್ಟು ಎರಡು ಬಾರಿ ಇಂಧನ ದರವನ್ನು ಇಳಿಕೆ ಮಾಡಲಾಯಿತು.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 98.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.21 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಅದೇ ರೀತಿ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ.

ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.76 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್​ಗೆ 97.40 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 88.35 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol Price Unchanged today on 2021 September 12 and check diesel price in Bangalore Delhi Mumbai and Major city)

Read Full Article

Click on your DTH Provider to Add TV9 Kannada