Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ಸತತ 9 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಕಳೆದ ವಾರ ಲೀಟರ್ ಪೆಟ್ರೋಲ್ ಬೆಲೆಯನ್ನು 13 ರಿಂದ 15 ಪೈಸೆ ಇಳಿಕೆ ಮಾಡಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 14 ರಿಂದ 15 ಪೈಸೆ ಇಳಿಕೆ ಮಾಡಲಾಗಿತ್ತು. ಆ ನಂತರ ಇಂಧನ ದರದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ಸತತ 9 ದಿನಗಳಿಂದ ಇಂಧನ ದರ ಸ್ಥಿರ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಸತತ 9ನೇ ದಿನವೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವಾರ ಲೀಟರ್ ಪೆಟ್ರೋಲ್ ಬೆಲೆಯನ್ನು (Petrol Price) 13 ರಿಂದ 15 ಪೈಸೆ ಇಳಿಕೆ ಮಾಡಿದ್ದರೆ, ಲೀಟರ್ ಡೀಸೆಲ್ ದರದಲ್ಲಿ (Diesel Price) 14 ರಿಂದ 15 ಪೈಸೆ ಇಳಿಕೆ ಮಾಡಲಾಗಿತ್ತು. ಆ ನಂತರ ಇಂಧನ ದರದಲ್ಲಿ (Fuel Price) ಯಾವುದೇ ಇಳಿಕೆ ಕಂಡು ಬಂದಿಲ್ಲ. ಇಂದು (ಸೆಪ್ಟೆಂಬರ್ 16, ಮಂಗಳವಾರ) ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಇದೆ.

ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಜತೆಗೆ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ಗೆ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ.

ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್​ನಲ್ಲಿ ಲೀಟರ್ ಪೆಟ್ರೋಲ್ ದರ 100ರ ಆಚೆಗಿದೆ. ಇದರಲ್ಲಿ ಬೆಂಗಳೂರು, ಮುಂಬೈ ಹಾಗೂ ಹೈದರಾಬಾದ್ ಕೂಡಾ ಈ ಪಟ್ಟಿಯಲ್ಲಿ ಸೇರಿವೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol Price Unchanged today on 2021 September 14 and check diesel price in Bangalore Delhi Mumbai and Major city)

Click on your DTH Provider to Add TV9 Kannada