AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 11ನೇ ದಿನವೂ ಪೆಟ್ರೋಲ್​, ಡೀಸೆಲ್​ ದರದಲ್ಲಿ ಇಳಿಕೆಯಿಲ್ಲ

Petrol Rate Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಇಲ್ಲ. ಸತತವಾಗಿ ಇಂದು 11ನೇ ದಿನ ಕೂಡಾ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ.

Petrol Price Today: ಸತತ 11ನೇ ದಿನವೂ ಪೆಟ್ರೋಲ್​, ಡೀಸೆಲ್​ ದರದಲ್ಲಿ ಇಳಿಕೆಯಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 16, 2021 | 7:34 AM

Petrol Diesel Price Today | ದೆಹಲಿ: ಕೆಲವು ದಿನಗಳ ಹಿಂದೆ ಪೆಟ್ರೋಲ್ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿತ್ತು. ಆ ನಂತರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಅದೇ ರೀತಿ ಇಂದು (ಸೆಪ್ಟೆಂಬರ್ 16, ಗುರುವಾರ) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಇಲ್ಲ. ಸತತವಾಗಿ ಇಂದು 11ನೇ ದಿನ ಕೂಡಾ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೊನೇಯದಾಗಿ ಸೆಪ್ಟೆಂಬರ್ 5ನೇ ತಾರೀಕಿನಂದು ಇಂಧನ ಬೆಲೆ ಕೊಂಚ ಬದಲಾವಣೆ ಮಾಡಿದ್ದವು. ಆ ದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15 ಪೈಸೆ ಇಳಿಕೆ ಮಾಡಲಾಯಿತು. ಆ ನಂತರದ ದಿನಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ದರ ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.62 ರೂಪಾಯಿ, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.96 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.52 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.70 ರೂಪಾಯಿ ಹಾಗೂ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಇದೆ.

ಪ್ರಮುಖ ನಗರಗಳಲ್ಲಿ ಡೀಸೆಲ್​ ದರ ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 88.62 ರೂಪಾಯಿ, ಮುಂಬೈನಲ್ಲಿ ಲೀಟರ್ ಡೀಸೆಲ್ ದರ 107.26 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 91.71 ರೂಪಾಯಿ, ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 93.26 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಡೀಸೆಲ್ ದರ 98.52 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ದರ 94.04 ರೂಪಾಯಿ ಹಾಗೂ ಹೈದರಾಬಾದ್​ನಲ್ಲಿ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಡೀಸೆಲ್ ದರ 94.55 ರೂಪಾಯಿ, ಜೈಪುರದಲ್ಲಿ ಲೀಟರ್ ಡೀಸೆಲ್ ದರ 97.6 ರೂಪಾಯಿ, ಲಕ್ನೋದಲ್ಲಿ ಲೀಟರ್ ಡೀಸೆಲ್ ದರ 89.02 ರೂಪಾಯಿ, ಛಂಡೀಗಢದಲ್ಲಿ ಲೀಟರ್ ಡೀಸೆಲ್ ದರ 88.35 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 16 and check diesel price in Bangalore Delhi Mumbai and Major city)

Published On - 7:17 am, Thu, 16 September 21

ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ