AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​​ ಬೆಲೆಯಲ್ಲಿ ಇಳಿಕೆಯಿಲ್ಲ; ಸತತ 12 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಯಥಾಸ್ಥಿತಿಯಲ್ಲಿದೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​​ ಬೆಲೆಯಲ್ಲಿ ಇಳಿಕೆಯಿಲ್ಲ; ಸತತ 12 ದಿನಗಳಿಂದ ಇಂಧನ ದರ ಸ್ಥಿರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 17, 2021 | 7:30 AM

Petrol Diesel Price Today | ದೆಹಲಿ: ಇಂದು ಸಹ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಸತತವಾಗಿ 12 ದಿನಗಳಿಂದ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ( ಸೆಪ್ಟೆಂಬರ್ 17, ಶುಕ್ರವಾರ) ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಯಥಾಸ್ಥಿತಿಯಲ್ಲಿದೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ.

ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.52 ರೂಪಾಯಿ ಇದೆ. ಅದೇ ರೀತಿ ಲೀಟರ್ ಡೀಸೆಲ್ ದರ 98.52 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ.

ಇನ್ನು, ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.55 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.6 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ಸೆಪ್ಟೆಂಬರ್ 5ರಂದು ಈ ತಿಂಗಳಿನಲ್ಲಿ ಮೊದಲ ಬಾರಿಗೆ ಇಂಧನ ಬೆಲೆ ಕೊಂಚ ಇಳಿಕೆ ಮಾಡಲಾಯಿತು. ಅಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15 ಪೈಸೆ ಇಳಿಕೆ ಮಾಡಲಾಯಿತು. ಬಳಿಕ ಇಲ್ಲಿಯವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 17 and check diesel price in Bangalore Delhi Mumbai and Major city)

Published On - 7:21 am, Fri, 17 September 21

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್