Petrol Price Today: ಪೆಟ್ರೋಲ್, ಡೀಸೆಲ್ ದರ ವಿವರ; ಇಂದು ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಪರಿಶೀಲಿಸಿ

Petrol Rate Today: ಸೆಪ್ಟೆಂಬರ್​ 5 ರಂದು ಇಂಧನ ದರ ಬದಲಾವಣೆ ಕಂಡಿತ್ತು. ಅಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15 ಪೈಸೆ ಇಳಿಕೆ ಮಾಡಲಾಯಿತು. ಪ್ರಮುಖ ನಗರಗಳಲ್ಲಿ ಪೆಟ್ರೋಲ್ , ಡೀಸೆಲ್ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಪೆಟ್ರೋಲ್, ಡೀಸೆಲ್ ದರ ವಿವರ; ಇಂದು ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಇಂದು ಸಹ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಸತತವಾಗಿ 13 ದಿನಗಳಿಂದ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ( ಸೆಪ್ಟೆಂಬರ್ 18, ಶನಿವಾರ ) ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಯಥಾಸ್ಥಿತಿಯಲ್ಲಿದೆ. ಸೆಪ್ಟೆಂಬರ್​ 5 ರಂದು ಇಂಧನ ದರ ಬದಲಾವಣೆ ಕಂಡಿತ್ತು. ಅಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15 ಪೈಸೆ ಇಳಿಕೆ ಮಾಡಲಾಯಿತು. ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ.

ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.52 ರೂಪಾಯಿ ಇದೆ. ಅದೇ ರೀತಿ ಲೀಟರ್ ಡೀಸೆಲ್ ದರ 98.52 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ.

ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.55 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.6 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol Price Unchanged today on 2021 September 18 and check diesel price in Bangalore Delhi Mumbai and Major city)

Read Full Article

Click on your DTH Provider to Add TV9 Kannada