AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ

Petrol Rate Today: ಕಳೆದ ವಾರದಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ 13 ರಿಂದ 15 ಪೈಸೆ ಇಳಿಕೆ ಮಾಡಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 14 ರಿಂದ 15 ಪೈಸೆ ಇಳಿಸಲಾಗಿತ್ತು. ಆ ನಂತರ ಇಲ್ಲಿಯವರೆಗೆ ಇಂಧನ ದರದಲ್ಲಿ ಯಾವುದೇ ಏರಿಳಿ ಕಂಡು ಬಂದಿಲ್ಲ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 19, 2021 | 7:42 AM

Share

Petrol Diesel Price Today | ದೆಹಲಿ: ಸತತ 14ನೇ ದಿನವೂ ಸರ್ಕಾರಿ ಸ್ವಾಮ್ಯದ ತೈ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಕಳೆದ ವಾರದಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ 13 ರಿಂದ 15 ಪೈಸೆ ಇಳಿಕೆ ಮಾಡಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 14 ರಿಂದ 15 ಪೈಸೆ ಇಳಿಸಲಾಗಿತ್ತು. ಆ ನಂತರ ಇಲ್ಲಿಯವರೆಗೆ ಇಂಧನ ದರದಲ್ಲಿ ಯಾವುದೇ ಏರಿಳಿ ಕಂಡು ಬಂದಿಲ್ಲ. ಇಂದಿಗೂ ಸಹ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ದರ 100ರ ಗಡಿಯಾಚೆಗೇ ಇದೆ.

ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.19 ರೂಪಾಯಿ, ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಜತೆಗೆ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ. ಅದೇ ರೀತಿ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.55 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.6 ರೂಪಾಯಿ ಇದೆ.

ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್​ನಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ದರ 100ರ ಗಡಿ ಆಚೆಗೇ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 19 and check diesel price in Bangalore Delhi Mumbai and Major city)

Published On - 7:26 am, Sun, 19 September 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು