AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!

Petrol Rate Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ಎರಡು ವಾರದಿಂದಲೂ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 10.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ.

Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on:Sep 21, 2021 | 7:34 AM

Share

Petrol Diesel Price Today | ದೆಹಲಿ: ಇಂದು (ಸೆ.21) ಪೆಟ್ರೋಲ್ (Petrol Price), ಡೀಸೆಲ್ ಬೆಲೆಗಳಲ್ಲಿ (Diesel Price) ಬದಲಾವಣೆಗಳಿಲ್ಲ. ಸತತವಾಗಿ 16 ದಿನಗಳ ಕಾಲ ಇಂಧನ ದರ (Fuel Price) ಸ್ಥಿರವಾಗಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ತೈಲ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ಎರಡು ವಾರದಿಂದಲೂ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 10.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಇನ್ನು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಇದೆ. ಹಾಗೆಯೇ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಇದೆ. ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್​ಗೆ 109.63 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 97.57 ರೂಪಾಯಿ ಇದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 103.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.38 ರೂಪಾಯಿ ಇದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 97.05 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 88.05 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 21 and check diesel price in Bangalore Delhi Mumbai and Major city)

Published On - 7:20 am, Tue, 21 September 21