AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿತಗಳಿಲ್ಲ; ಸತತ 18 ದಿನಗಳಿಂದ ಸ್ಥಿರ

Petrol Rate Today: ಸತತ 2 ವಾರದಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರವಾಗಿಯೇ ಇದೆ. ಸೆಪ್ಟೆಂಬರ್​ ತಿಂಗಳ ಮೊದಲ ವಾರದಲ್ಲಿ ಅಲ್ಪ ಪ್ರಮಾಣದಲ್ಲಿ ಇಂಧನ ದರವನ್ನು ಇಳಿಕೆ ಮಾಡಲಾಗಿತ್ತು. ಆ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ.

Petrol Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿತಗಳಿಲ್ಲ; ಸತತ 18 ದಿನಗಳಿಂದ ಸ್ಥಿರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 23, 2021 | 7:40 AM

Share

Petrol Diesel Price Today | ದೆಹಲಿ: ಸತತ 18 ದಿನಗಳವರೆಗೆ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರವಾಗಿಯೇ ಇದೆ. ಇಂದು ಸಹ (ಸೆಪ್ಟೆಂಬರ್ 23, ಗುರವಾರ) ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಸೆಪ್ಟೆಂಬರ್​ ತಿಂಗಳ ಮೊದಲ ವಾರದಲ್ಲಿ ಅಲ್ಪ ಪ್ರಮಾಣದಲ್ಲಿ ಇಂಧನ ದರವನ್ನು ಇಳಿಕೆ ಮಾಡಲಾಗಿತ್ತು. ಆ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 88.62 ರೂಪಾಯಿ ಇದೆ. ಕಳೆದ 2 ವಾರಗಳಿಂದಲೂ ಸಹ ಇದೇ ಬೆಲೆಯಲ್ಲಿ ಗ್ರಾಹಕರು ಖರೀದಿಸುತ್ತಿದ್ದಾರೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.38 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೊಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್​ಗೆ 109.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.26 ರೂ. ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಇನ್ನು, ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 97.05 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.05 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್​ಗೆ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.05 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 23 and check diesel price in Bangalore Delhi Mumbai and Major city)

Published On - 7:27 am, Thu, 23 September 21

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!