Petrol Price Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!

Petrol Rate Today: ಕಳೆದ ಶುಕ್ರವಾರ ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿತ್ತು. ಲೀಟರ್ ಡೀಸೆಲ್ ಬೆಲೆಯಲ್ಲಿ 20 ರಿಂದ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ಆದರೆ ಪೆಟ್ರೋಲ್ ದರ ಮಾತ್ರ ಸತತ 20 ದಿನಗಳಿಂದ ಸ್ಥಿರವಾಗಿಯೇ ಇದೆ.

Petrol Price Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!
ಸಾಂದರ್ಭಿಕ ಚಿತ್ರ
Edited By:

Updated on: Sep 26, 2021 | 7:49 AM

Petrol Diesel Price Today | ದೆಹಲಿ: ಇಂದು (ಸೆಪ್ಟೆಂಬರ್ 26, ಭಾನುವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರ ಸ್ಥಿರವಾಗಿಯೇ ಇದೆ. ಕಳೆದ ಶುಕ್ರವಾರ ಡೀಸೆಲ್ ದರದಲ್ಲಿ (Diesel Price) ಏರಿಕೆ ಕಂಡು ಬಂದಿತ್ತು. ಲೀಟರ್ ಡೀಸೆಲ್ ಬೆಲೆಯಲ್ಲಿ 20 ರಿಂದ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ಆದರೆ ಪೆಟ್ರೋಲ್ ದರ ಮಾತ್ರ ಸತತ 20 ದಿನಗಳಿಂದ ಸ್ಥಿರವಾಗಿಯೇ ಇದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.26 ರೂಪಾಯಿ ಇದೆ ಮತ್ತು ಡೀಸೆಲ್ ಲೀಟರ್​ಗೆ 96.41 ರೂಪಾಯಿ ಇದೆ. ಅದೇ ರೀತಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಇದೆ ಮತ್ತು ಲೀಟರ್ ಡೀಸೆಲ್ ದರ 88.82 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್​ಗೆ 101.62 ರೂಪಾಯಿ ಇದೆ ಮತ್ತು ಲೀಟರ್ ಡೀಸೆಲ್ ಬೆಲೆ 91.92 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಇದೆ ಮತ್ತು ಲೀಟರ್ ಡೀಸೆಲ್ ದರ 93.46 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಇದೆ ಮತ್ತು ಲೀಟರ್ ಡೀಸೆಲ್ ದರ 94.27 ರೂಪಾಯಿ ಇದೆ. ಅದೇ ರೀತಿ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.26 ರೂಪಾಯಿ ಇದೆ ಮತ್ತು ಡೀಸೆಲ್ ದರ 96.92 ರೂಪಾಯಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol Price Unchanged today on 2021 September 26 and check diesel price in Bangalore Delhi Mumbai and Major city)

Web contact

TV9 Kannada

Read More
Follow Us