Petrol Price Today: ಇಂದು ಡೀಸೆಲ್​ ಬೆಲೆ ಸ್ಥಿರ; ಸತತ 3 ವಾರಗಳಿಂದ ಪೆಟ್ರೋಲ್​ ದರದಲ್ಲಿಯೂ ಬದಲಾವಣೆಗಳಿಲ್ಲ!

Petrol Rate Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿ ಇಂದು ಸಹ ಇಂಧನ ದರ ಸ್ಥಿರವಾಗಿಯೇ ಇದೆ. ಆದರೆ ನಿನ್ನೆ ಲೀಟರ್​ ಡೀಸೆಲ್ ಬೆಲೆಯಲ್ಲಿ 25 ರಿಂದ 27 ಪೈಸೆ ಹೆಚ್ಚಳ ಮಾಡಲಾಯಿತು. ಆ ಬಳಿಕ ಡೀಸೆಲ್ ದರ ಎಲ್ಲೆಡೆ ಏರಿಕೆ ಕಂಡಿದೆ.

Petrol Price Today: ಇಂದು ಡೀಸೆಲ್​ ಬೆಲೆ ಸ್ಥಿರ; ಸತತ 3 ವಾರಗಳಿಂದ ಪೆಟ್ರೋಲ್​ ದರದಲ್ಲಿಯೂ ಬದಲಾವಣೆಗಳಿಲ್ಲ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Sep 27, 2021 | 7:31 AM

Petrol Diesel Price Today | ದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ( ಸೆಪ್ಟೆಂಬರ್ 27, ಸೋಮವಾರ) ಪೆಟ್ರೋಲ್ (Petrol Price), ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿ ಇಂದು ಸಹ ಇಂಧನ ದರ (Fuel Price) ಸ್ಥಿರವಾಗಿಯೇ ಇದೆ. ಆದರೆ ನಿನ್ನೆ ಲೀಟರ್​ ಡೀಸೆಲ್ ಬೆಲೆಯಲ್ಲಿ (Diesel Price) 25 ರಿಂದ 27 ಪೈಸೆ ಹೆಚ್ಚಳ ಮಾಡಲಾಯಿತು. ಆ ಬಳಿಕ ಡೀಸೆಲ್ ದರ ಎಲ್ಲೆಡೆ ಏರಿಕೆ ಕಂಡಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.07 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.68 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.17 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೊಲ್ ದರ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.69 ರೂಪಾಯಿ ಇದೆ.

ಕಳೆದ ಶುಕ್ರವಾದ ಲೀಟರ್ ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಯಿತು. ಆ ಬಳಿಕ ಒಂದು ದಿನದ ನಂತರ ನಿನ್ನೆ ಭಾನುವಾರ ಮತ್ತೆ ಲೀಟರ್ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಆ ನಂತರ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಬದಲಾವಣೆಗಳಿಲ್ಲ. ಪೆಟ್ರೋಲ್ ದರ ಸತತ 3 ವಾರಗಳ ಕಾಲ ಸ್ಥಿರವಾಗಿಯೇ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 27 and check diesel price in Bangalore Delhi Mumbai and Major city)

Published On - 7:25 am, Mon, 27 September 21

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್