AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಳಿತಗಳಿಲ್ಲ!

Petrol Rate Today: ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ತೈಲ ದರ ಸ್ಥಿರವಾಗಿಯೇ ಉಳಿದಿದೆ.

Petrol Price Today: ಇಂದು ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಳಿತಗಳಿಲ್ಲ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 07, 2021 | 7:33 AM

Petrol Diesel Price Today | ದೆಹಲಿ: ಕಳೆದ ಭಾನುವಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಚ ಇಳಿಕೆ ಮಾಡಲಾಗಿತ್ತು. ಬಳಿಕ ಇಂದು ಇಂಧನ ದರಲ್ಲಿ (Fuel Price) ಯಾವುದೇ ಏರಿಳತ ಕಂಡು ಬಂದಿಲ್ಲ. ದೇಶಾದ್ಯಂತ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಇಂದು ಸಹ ( ಸೆಪ್ಟೆಂಬರ್ 7, ಮಂಗಳವಾರ) ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆಯಾಗಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ತೈಲ ದರ ಸ್ಥಿರವಾಗಿಯೇ ಉಳಿದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ಗೆ 98.96 ರೂಪಾಯಿ ಹಾಹೂ ಲೀಟರ್ ಡೀಸೆಲ್​ಗೆ 93.26 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.71 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 109.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 103.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.38 ರೂಪಾಯಿ ಇದೆ. ಗಾಂಧೀನಗರದಲ್ಲಿ ಲೀಟರ್ ಪೆಟ್ರೊಲ್ ಬೆಲೆ 98.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.70 ರೂಪಾಯಿ ಇದೆ. ಇನ್ನು, ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 97.05 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.05 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 7 and check diesel price in Bangalore Delhi Mumbai and Major city)

Published On - 7:23 am, Tue, 7 September 21