AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

Petrol Rate Today: ಕಳೆದ ಭಾನುವಾರ, ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಬೆಲೆ 10 ಪೈಸೆಯಿಂದ 15 ಪೈಸೆಗೆ ಇಳಿಕೆಯಾಗಿದೆ. ಆದರೂ ಪೆಟ್ರೋಲ್-ಡೀಸೆಲ್ ಅನ್ನು ಇನ್ನೂ ದಾಖಲೆ ಮಟ್ಟದಲ್ಲಿ ಮಾರಾಟ ಮಾಡಲಾಗುತ್ತಿದೆ.

Petrol Price Today: ಸ್ಥಿರತೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 08, 2021 | 7:32 AM

Share

Petrol Diesel Price Today | ದೆಹಲಿ: ದೇಶೀಯ ತೈಲ ಕಂಪನಿಗಳು ಇಂದು (ಸೆಪ್ಟೆಂಬರ್ 8, ಬುಧವಾರ) ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ ಇಂದು ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಸ್ಥಿರವಾಗಿಯೇ ಉಳಿದಿದೆ. ಪೆಟ್ರೋಲ್-ಡೀಸೆಲ್ ಬೆಲೆಗಳು ದೀರ್ಘಕಾಲದವರೆಗೆ ಏರಿಕೆಯನ್ನು ಕಂಡಿರಲಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ, ಬೆಲೆ ಬದಲಾವಣೆಯಾಗಿದ್ದು, ಇಂಧನ ದರ ಕೊಂಚ ಇಳಿಕೆಯಾಗಿತ್ತು.

ಕಳೆದ ಭಾನುವಾರ, ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಬೆಲೆ 10 ಪೈಸೆಯಿಂದ 15 ಪೈಸೆಗೆ ಇಳಿಕೆಯಾಗಿದೆ. ಆದರೂ ಪೆಟ್ರೋಲ್-ಡೀಸೆಲ್ ಅನ್ನು ಇನ್ನೂ ದಾಖಲೆ ಮಟ್ಟದಲ್ಲಿ ಮಾರಾಟ ಮಾಡಲಾಗುತ್ತಿದೆ. ಹೆಚ್ಚಿನ ನಗರಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 100 ರೂ.ಗಿಂತ ಹೆಚ್ಚಿದೆ ಮತ್ತು ಅನೇಕ ನಗರಗಳಲ್ಲಿ ಡೀಸೆಲ್ ದರ ಕೂಡ 100 ಗಡಿ ದಾಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್​ಗೆ 101.19 ಪೈಸೆ ದರದಲ್ಲಿ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಡೀಸೆಲ್ ಪ್ರತಿ ಲೀಟರ್‌ಗೆ 88.62 ರೂಪಾಯಿಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್​ಗೆ 107.26 ರೂ. ಅದೇ ಸಮಯದಲ್ಲಿ, ಡೀಸೆಲ್ ಪ್ರತಿ ಲೀಟರ್‌ಗೆ 96.19 ಪೈಸೆಯಾಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ಗೆ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 93.26 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.71 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 109.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 103.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.38 ರೂಪಾಯಿ ಇದೆ. ಗಾಂಧೀನಗರದಲ್ಲಿ ಲೀಟರ್ ಪೆಟ್ರೊಲ್ ಬೆಲೆ 98.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.70 ರೂಪಾಯಿ ಇದೆ. ಇನ್ನು, ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 97.05 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.05 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 8 and check diesel price in Bangalore Delhi Mumbai and Major city)

Published On - 7:28 am, Wed, 8 September 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ