AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ

Petrol Rate Today: ಕಳೆದ ಕೆಲವು ದಿನಗಳ ಹಿಂದೆ ತೈಲ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಆ ಬಳಿಕ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಬದಲಾಗದೇ ಹಾಗೆಯೇ ಉಳಿದಿದೆ.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 09, 2021 | 7:30 AM

Share

Petrol Diesel Price Today | ದೆಹಲಿ: ಕಳೆದ ಭಾನುವಾರ ಇಂಧನ ಬೆಲೆ (Fuel Price) ಕೊಂಚ ಇಳಿಕೆ ಕಂಡ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇಂದು (ಸೆಪ್ಟೆಂಬರ್ 9, ಗುರುವಾರ) ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರವಾಗಿಯೇ ಉಳಿದಿದೆ. ಕಳೆದ ಕೆಲವು ದಿನಗಳ ಹಿಂದೆ ತೈಲ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಆ ಬಳಿಕ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಬದಲಾಗದೇ ಹಾಗೆಯೇ ಉಳಿದಿದೆ.

ಕಳೆದ ಭಾನುವಾರ ದೇಶಾದ್ಯಂತ ಲೀಟರ್ ಪೆಟ್ರೋಲ್ ಬೆಲೆಯನ್ನು 10 ರಿಂದ 15 ಪೈಸೆ ಇಳಿಕೆ ಮಾಡಲಾಯಿತು. ಹೆಚ್ಚಿನ ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 100ರೂ.ಗಿಂತ ಹೆಚ್ಚು ಮತ್ತು ಕೆಲವು ನಗರಗಳಲ್ಲಿ ಡೀಸೆಲ್ ಕೂಡಾ 100 ರೂ. ಗಡಿ ದಾಟಿದೆ. ಇಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ ನಿನ್ನೆ ದರವೇ ಇಂದು ಸಹ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್​ಗೆ 101.62 ರೂಪಾಯಿ ಕೊಟ್ಟು ಹಾಗೂ ಲೀಟರ್ ಡೀಸೆಲ್​ಗೆ 91.71 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ನೋಯ್ಡಾದಲ್ಲಿ ಲೀಟರ್ ಪೆಟ್ರೊಲ್ ದರ 98.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.21 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 105.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ.

ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.55 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.32 ರೂಪಾಯಿ ಇದೆ. ಇನ್ನು, ಛಂಡೀಗಢದಲ್ಲಿ ಲೀಟರ್ ಪೆಟ್ರೊಲ್ ಬೆಲೆ 97.40 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 88.35 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol Price Unchanged today on 2021 September 9 and check diesel price in Bangalore Delhi Mumbai and Major city)

Published On - 7:18 am, Thu, 9 September 21

Follow Us
TV9 Web
TV9 Web

TV9 Kannada

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ