Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

| Updated By: shivaprasad.hs

Updated on: May 21, 2022 | 9:19 AM

Petrol price in Bengaluru | Diesel Price on 21.05.2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
Follow us on

ದೇಶದಲ್ಲಿ ಕಳೆದ 45 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಇಂದು (ಮೇ 21) ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಯಾವಯಾವ ನಗರಗಳಲ್ಲಿ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕೆಲವು ವರದಿಗಳ ಪ್ರಕಾರ ಸರ್ಕಾರವು ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಇತ್ತೀಚೆಗೆ ಬ್ಯುಸಿನೆಸ್​​ಟುಡೆ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಅದರಲ್ಲಿ ಒಂದೇ ಬಾರಿ ದರವನ್ನು ಏರಿಸದೇ ಶ್ರೇಣೀಕೃತ ಮಾದರಿಯಲ್ಲಿ ಏರಿಸುವ ಪ್ರಸ್ತಾಪವಿದೆ ಎಂದು ಮಾಹಿತಿ ನೀಡಲಾಗಿದೆ. ಪೆಟ್ರೋಲ್​ಗಿಂತಲೂ ಡೀಸೆಲ್ ದರದಲ್ಲಿ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ
Gold Price Today: ಚಿನ್ನದ ಬೆಲೆ ಮತ್ತೆ ಹೆಚ್ಚಳ; 3,300 ರೂ. ಕುಸಿತ ಕಂಡ ಬೆಳ್ಳಿ ದರ
ಪಿಯುಸಿಗೆ ಓದು ನಿಲ್ಲಿಸಿ, ಕತ್ತೆ ಹಾಲು ವ್ಯಾಪಾರಕ್ಕೆ ಕೈ ಹಾಕಿ ಭಾರೀ ಸಂಪಾದನೆ ಮಾಡುತ್ತಿದ್ದಾನೆ ಈ ಯುವಕ! ಕತ್ತೆ ಹಾಲು ಸರಬರಾಜು ಮಾಡುತ್ತಿರುವುದು ಯಾರಿಗೆ ಗೊತ್ತಾ?
SBI ATM Cash Withdraw: ಒಟಿಪಿ ಮೂಲಕ ಎಸ್​ಬಿಐ ಎಟಿಎಂ ನಗದು ವಿಥ್​ಡ್ರಾ ಹೇಗೆ ಗೊತ್ತೆ?
Elon Musk: ಮಸ್ಕ್ ವಿರುದ್ಧ ಲೈಂಗಿಕ ದುರ್ವರ್ತನೆ ಆರೋಪಕ್ಕೆ ವಿಮಾನ ಪರಿಚಾರಕಿಗೆ 250000 ಯುಎಸ್​ಡಿ ಕೊಟ್ಟು ಇತ್ಯರ್ಥ ಮಾಡಿದ ಕಂಪೆನಿ ಎಂದ ವರದಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.