AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಒಂದು ತಿಂಗಳ ಬಳಿಕ ಮೊದಲ ಬಾರಿಗೆ ಇಳಿಕೆ ಕಂಡ ಪೆಟ್ರೋಲ್​ ಬೆಲೆ, ಡೀಸೆಲ್​ ಬೆಲೆಯಲ್ಲಿಯೂ ಕಡಿತ

Petrol Diesel Price Today: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 20 ಪೈಸೆ ಅಗ್ಗವಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿಯೂ 20 ಪೈಸೆ ಕಡಿತಗೊಳಿಸಲಾಗಿದೆ.

Petrol Price Today: ಒಂದು ತಿಂಗಳ ಬಳಿಕ ಮೊದಲ ಬಾರಿಗೆ ಇಳಿಕೆ ಕಂಡ ಪೆಟ್ರೋಲ್​ ಬೆಲೆ, ಡೀಸೆಲ್​ ಬೆಲೆಯಲ್ಲಿಯೂ ಕಡಿತ
ಸಾಂದರ್ಭಿಕ ಚಿತ್ರ (ಪಿಟಿಐ ಚಿತ್ರ)
TV9 Web
| Edited By: |

Updated on:Aug 22, 2021 | 8:24 AM

Share

Petrol Diesel Rate Today | ದೆಹಲಿ: ಹೆಚ್ಚಿನ ನಗರಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ (Petrol Price) 100ರ ಗಡಿ ದಾಟಿ ಮುನ್ನುಗ್ಗಿದೆ. ಕಳೆದ 34 ದಿನಗಳಿಂದ ಪೆಟ್ರೋಲ್ ಬೆಲೆ ಸ್ಥಿರವಾಗಿಯೇ ಉಳಿದಿತ್ತು. ಕಡೆಯದಾಗಿ ಜುಲೈ 18ರಂದು ಪೆಟ್ರೋಲ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಕಳೆದ 3 ದಿನಗಳಿಂದ ಡೀಸೆಲ್ ದರ (Diesel Price) ಇಳಿಕೆ ಕಾಣುತ್ತಿತ್ತು. ಆದರೆ ಪೆಟ್ರೋಲ್ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿರಲಿಲ್ಲ. ಆದರೆ ಇಂದು ( ಆಗಸ್ಟ್ 22, ಭಾನುವಾರ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆರಡೂ ಇಳಿಕೆ ಕಂಡು ಬಂದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 20 ಪೈಸೆ ಅಗ್ಗವಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿಯೂ 20 ಪೈಸೆ ಕಡಿತಗೊಳಿಸಲಾಗಿದೆ. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.07 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.64 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.13 ರೂಪಾಯಿಗೆ ಕುಸಿತ ಕಂಡಿದೆ.

ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.13 ರೂಪಾಯಿಗೆ ಇಳಿದಿದೆ. ಅದೇ ರೀತಿ ಜೈಪುರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.22 ರೂಪಾಯಿಗೆ ಇಳಿಕೆಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 110.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.88 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.64 ರೂಪಾಯಿಗೆ ಇಳಿಕೆ ಆಗಿದೆ.

19 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100ರ ಗಡಿ ದಾಟಿ ಮುನ್ನುಗ್ಗಿತ್ತು. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಹಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಕೂಡಾ ಈ ಪಟ್ಟಿಯಲ್ಲಿ ಸೇರಿವೆ. ಇದರ ಹೊರತಾಗಿ ಪ್ರಮುಖ ಮೆಟ್ರೋ ನಗರಗಳಾದ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿಯೂ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಠ ಮಟ್ಟದಲ್ಲಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:09 am, Sun, 22 August 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ