Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆ ಇಂದು ಮತ್ತೆ ಏರಿಕೆ; ಗರಿಷ್ಠ ಮಟ್ಟ ತಲುಪಿದೆ ಇಂಧನ ದರ

Petrol Diesel Rate Today: ಕಳೆದ ಮೇ 4ನೇ ತಾರಿಕಿನಂದು ಇಂಧನ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಆಗಿನಿಂದ ಇಲ್ಲಿಯವರೆಗೆ ಒಟ್ಟು 22 ಬಾರಿ ಪೆಟ್ರೋಲ್ ಮತ್ತು ಡೀಸೆಲ್​ ದರ ಏರಿಕೆ ಕಂಡು ಬಂದಿದೆ.

Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆ ಇಂದು ಮತ್ತೆ ಏರಿಕೆ; ಗರಿಷ್ಠ ಮಟ್ಟ ತಲುಪಿದೆ ಇಂಧನ ದರ
ಪಿಟಿಐ ಚಿತ್ರ

ದೆಹಲಿ: ಒಂದು ದಿನ ವಿರಾಮದ ಬಳಿಕ ಮತ್ತೆ ಇಂದು ( ಜೂನ್​ 9) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯಾಗಿದೆ. ದೇಶದ ವಿವಿಧ ನಗರಗಳಲ್ಲಿ ಇದೀಗ ಇಂಧನ ದರ ಗರಿಷ್ಟ ಮಟ್ಟದಲ್ಲಿದೆ. ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ದರವನ್ನು 19 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ಲೀಟರ್​ ಪೆಟ್ರೋಲ್​ ದರ 95.56 ರೂ. ಹಾಗೂ ಲೀಟರ್​ ಡೀಸೆಲ್​ ದರ 86.47 ರೂ. ಆಗಿದೆ. ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ 18 ದಿನಗಳ ಕಾಲ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಗಳು ಬದಲಾಗಿರಲಿಲ್ಲ. ಆ ಬಳಿಕ ಕಳೆದ ಮೇ ತಿಂಗಳಿನ 4ನೇ ತಾರೀಕಿನಿಂದ ಇಲ್ಲಿಯವರೆಗೂ ಇಂಧನ ದರ ಏರುತ್ತಲೇ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ತೈಲ ದರ ಏರಿಕೆ ಕಂಡಿದ್ದು, ಕಳೆದ ಮೇ 29ನೇ ತಾರೀಕಿನಂದು 100 ಗಡಿ ದಾಟಿ ಪ್ರಮುಖ ಮೆಟ್ರೋ ನಗರಗಳಲ್ಲಿಯೇ ಗರಿಷ್ಠ ಮಟ್ಟದಲ್ಲಿದೆ. ಇಂದು ಸಹ ಇಂಧನ ದರ ಏರಿಕೆ ಕಂಡಿದ್ದರಿಂದ ಲೀಟರ್​ ಪೆಟ್ರೋಲ್​ ದರ 101.76 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.85 ರೂಪಾಯಿ ನಿಗದಿಯಾಗಿದೆ.

ಅದೇ ರೀತಿ ಚೆನ್ನೈನಲ್ಲಿ ಇಂಧನ ದರ ಏರಿಕೆಯ ಬಳಿಕ ಲೀಟರ್​ ಪೆಟ್ರೋಲ್​ ದರ 96.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 91.15 ರೂಪಾಯಿ ಆಗಿದೆ. ಹಾಗೂ ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್​ ದರ 98.75 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 91.67 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html