Petrol Price Today: ಇಂದು ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

TV9 Digital Desk

| Edited By: shruti hegde

Updated on:Sep 06, 2021 | 7:36 AM

Petrol Rate Today: ನಿನ್ನೆ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 10 ರಿಂದ 15 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 15 ಪೈಸೆ ಇಳಿಕೆ ಮಾಡಲಾಯಿತು. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದು ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ನಿನ್ನೆ ಇಂಧನ ದರದಲ್ಲಿ (Fuel Price) ಕೊಂಚ ಇಳಿಕೆ ಕಂಡ ಬಳಿಕ ಇಂದು ( ಸೆಪ್ಟೆಂಬರ್ 6, ಸೋಮವಾರ) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರವಾಗಿಯೇ ಉಳಿದಿದೆ. ನಿನ್ನೆ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 10 ರಿಂದ 15 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 15 ಪೈಸೆ ಇಳಿಕೆ ಮಾಡಲಾಯಿತು. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ಗೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ನಿಗದಿಯಾಗಿದೆ.

ದೇಶಾದ್ಯಂತ ಸುಮಾರು 19 ರಾಜ್ಯಗಳಲ್ಲಿ ಲೀಟ್ ಪೆಟ್ರೋಲ್ ದರ 100ರ ಆಚೆಗಿದೆ ದೇಶಾದ್ಯಂತ ಸುಮಾರು 19 ರಾಜ್ಯಗಳಲ್ಲಿ ಲೀಟರ್ ಪೆಟ್ರೊಲ್ ಬೆಲೆ 100ರ ಗಡಿ ದಾಟಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಗೆ ಸೇರಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನಲ್ಲಿಯೂ ಸಹ ಲೀಟರ್ ಪೆಟ್ರೊಲ್ ಬೆಲೆ 100ರ ಗಡಿ ಆಚೆಗಿದೆ.

ಪ್ರಮುಖ ನಗರಗಳಲ್ಲಿನ ಪೆಟ್ರೋಲ್​, ಡೀಸೆಲ್​ ಬೆಲೆ ವಿವರ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.63 ರೂಪಾಯಿ ಹಾಗೂ ಲೀಟರ್ ಡೀಸಲ್ ದರ 97.43 ರೂಪಾಯಿ ಇದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96.21 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.57 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 98.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.21 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ಗೆ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 94.04 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.35 ರೂಪಾಯಿ ಇದೆ. ಇನ್ನು, ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ನಿನ್ನೆ ದರ ಇಳಿಕೆ ಮಾಡಲಾಗಿತ್ತು ಕಳೆದ ಹಲವು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಇಳಿಕೆ ಆಗದೇ ಸ್ಥಿರವಾಗಿಯೇ ಉಳಿದಿತ್ತು. ಕಳೆದ ಆಗಸ್ಟ್​ ತಿಂಗಳಿನ ಕೊನೆಯ ವಾರದಲ್ಲಿ ಎರಡು ಬಾರಿ ಪೆಟ್ರೋಲ್​ ದರವನ್ನು ಸ್ವಲ್ಪ ಇಳಿಕೆ ಮಾಡಲಾಯಿತು. ಆ ನಂತರದಲ್ಲಿ ನಿನ್ನೆ ರವಿವಾರ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ 15 ಪೈಸೆ ಇಳಿಕೆ ಮಾಡಲಾಗಿದೆ. ಆ ಬಳಿಕ ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada