AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಪೆಟ್ರೋಲ್​, ಡೀಸೆಲ್​ ದರದಲ್ಲಿ ಇಂದು ಯಾವುದೇ ಬದಲಾವಣೆಗಳಿಲ್ಲ; ಸತತ 18 ದಿನಗಳಿಂದ ಸ್ಥಿರ

Petrol Rate Today : ಯಾವುದೇ ದರ ವ್ಯತ್ಯಾಸವಿಲ್ಲದೆ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ.

Petrol Price: ಪೆಟ್ರೋಲ್​, ಡೀಸೆಲ್​ ದರದಲ್ಲಿ ಇಂದು ಯಾವುದೇ ಬದಲಾವಣೆಗಳಿಲ್ಲ; ಸತತ 18 ದಿನಗಳಿಂದ ಸ್ಥಿರ
ಸಾಂದರ್ಭಿಕ ಚಿತ್ರ (ಪಿಟಿಐ ಚಿತ್ರ)
TV9 Web
| Edited By: |

Updated on: Aug 04, 2021 | 8:19 AM

Share

Petrol Diesel price | ದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದು ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆ ಮಾಡಿಲ್ಲ. ಸತತ 18 ದಿನಗಳಿಂದ ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರ (Diesel Price) ಯಥಾಸ್ಥಿತಿಯಲ್ಲಿದೆ. ಎರಡು ವಾರಗಳ ಹಿಂದೆ ತೈಲ ದರವನ್ನು ಏರಿಕೆ ಮಾಡಲಾಗಿತ್ತು. ಆ ನಂತರದ ದಿನಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿಯನ್ನು ಕಾಯ್ದಿರಿಸಿಕೊಂಡಿದೆ. ಅದೇ ರೀತಿ ಲೀಟರ್ ಡೀಸೆಲ್ ದರವೂ ಸಹ 89.87 ರೂಪಾಯಿ ಇದೆ. ಇಂಧನ ದರ 41 ಬಾರಿ ಹೆಚ್ಚಳವಾಗಿದೆ ಹಾಗೆಯೇ 49 ಬಾರಿ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಏರಿಕೆಯತ್ತ ಸಾಗಿದಾಗ ಪೆಟ್ರೋಲ್ ಬೆಲೆಯಲ್ಲಿ 11.44 ರೂಪಾಯಿ ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ದರದಲ್ಲಿ 9.14 ರೂಪಾಯಿಗೆ ಏರಿಕೆಯಾಗಿದೆ.

ಯಾವುದೇ ದರ ವ್ಯತ್ಯಾಸವಿಲ್ಲದೆ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಇದೆ. ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಇನ್ನು, ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

15 ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಅವುಗಳಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ತಮಿಳು ನಾಡು, ಕೇರಳ, ಬಿಹಾರ ಮತ್ತು ಪಂಜಾಬ್ ಕೂಡಾ ಹೌದು.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ