AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಇಂದು ಡೀಸೆಲ್​ ಬೆಲೆ ಇಳಿಕೆ ಕಂಡಿದೆ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ

Petrol Diesel Rate Today: ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಸರ್ಕಾರಿ ತೈಲ ಕಂಪನಿಗಳು ಲೀಟರ್ ಡೀಸೆಲ್ ಬೆಲೆಯಲ್ಲಿ 19 ರಿಂದ 21 ಪೈಸೆ ಇಳಿಕೆ ಮಾಡಿದೆ.

Petrol Diesel Price Today: ಇಂದು ಡೀಸೆಲ್​ ಬೆಲೆ ಇಳಿಕೆ ಕಂಡಿದೆ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 18, 2021 | 8:25 AM

Share

Petrol Diesel Price Today | ದೆಹಲಿ: ಸತತವಾಗಿ ಒಂದು ತಿಂಗಳಿನಿಂದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರವಾಗಿಯೇ ಉಳಿದಿತ್ತು. ಇಂದು (ಆಗಸ್ಟ್ 18, ಬುಧವಾರ) ಡೀಸೆಲ್ ದರ ಕೊಂಚ ಇಳಿಕೆಯತ್ತ ಸಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಸರ್ಕಾರಿ ತೈಲ ಕಂಪನಿಗಳು ಲೀಟರ್ ಡೀಸೆಲ್ ಬೆಲೆಯಲ್ಲಿ 19 ರಿಂದ 21 ಪೈಸೆ ಇಳಿಕೆ ಮಾಡಿದೆ. ದೆಹಲಿಯಲ್ಲಿ ಲೀಟರ್ ಡೀಸೆಲ್ ಬೆಲೆಯಲ್ಲಿ 20 ಪೈಸೆ ಇಳಿಕೆ ಮಾಡಲಾಗಿದೆ.

ದೆಹಲಿಯಲ್ಲಿ 20 ಪೈಸೆ ಇಳಿಕೆಯ ಬಳಿಕ ಲೀಟರ್ ಡೀಸೆಲ್ ಬೆಲೆ 89.87 ರೂಪಾಯಿಯಿಂದ 89.67 ರೂಪಾಯಿಗೆ ಇಳಿಕೆಯಾಗಿದೆ. ಆದರೆ ಪೆಟ್ರೋಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಹಾಗಾಗಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿಯೇ ಇದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ಬೆಲೆಯಲ್ಲಿ 21 ಪೈಸೆ ಇಳಿಕೆ ಮಾಡಲಾಯಿತು. ಆ ಮೂಲಕ ಲೀಟರ್ ಡೀಸೆಲ್ ಬೆಲೆ 97.45 ರೂಪಾಯಿಯಿಂದ 97.24 ರೂಪಾಯಿಗೆ ಇಳಿಕೆಯಾಗಿದೆ. ಪೆಟ್ರೋಲ್ ಬೆಲೆ ಸ್ಥಿರವಾಗಿಯೇ ಉಳಿದಿದ್ದು 107.83 ರೂಪಾಯಿ ಇದೆ.

ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ಬೆಲೆಯನ್ನು 93.02 ರೂಪಾಯಿಯಿಂದ 92.82 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿ 20 ಪೈಸೆ ಇಳಿಕೆ ಮಾಡಲಾಗಿದೆ. ಪೆಟ್ರೋಲ್ ದರ ಯಥಾಸ್ಥಿತಿಯಲ್ಲಿದ್ದು ಲೀಟರ್ ಪೆಟ್ರೋಲ್​ಗೆ 102.08 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಚೆನ್ನೈನಲ್ಲಿ ಡೀಸೆಲ್ ಬೆಲೆ 19 ಪೈಸೆ ಇಳಿಕೆಯಾಗಿದೆ. ಆ ಮೂಲಕ ಲೀಟರ್ ಡೀಸೆಲ್ ಬೆಲೆ 94.39 ರೂಪಾಯಿಯಿಂದ 94.20 ರೂಪಾಯಿಗೆ ಇಳಿಕೆಯಾಗಿದೆ. ಲೀಟರ್ ಪೆಟ್ರೋಲ್ ಬೆಲೆ 99.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ದರ 95.26 ರೂಪಾಯಿಗೆ ಇಳಿದಿದೆ. ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಇದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:12 am, Wed, 18 August 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ