AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today (August 8) : ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಕಳೆದ ಮೂರು ವಾರಗಳಿಂದಲೂ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ತೈಲ ದರ ಯಥಾಸ್ಥಿತಿಯಲ್ಲಿದೆ.

Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಪಿಟಿಐ ಚಿತ್ರ
TV9 Web
| Edited By: |

Updated on:Aug 08, 2021 | 8:12 AM

Share

Petrol Diesel Rate Today | ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಂದು (ಆಗಸ್ಟ್ 8, ಭಾನುವಾರ) ಯಾವುದೇ ಬದಲಾವಣೆ ಕಂಡಿಲ್ಲ. ಸತತ 22 ದಿನಗಳ ಕಾಲ ಇಂಧನ ದರ (Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ ಆ ಕಾರಣ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 89.87 ರೂಪಾಯಿ ಇದೆ. ಕಳೆದ ಮೂರು ವಾರಗಳಿಂದಲೂ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ತೈಲ ದರ ಯಥಾಸ್ಥಿತಿಯಲ್ಲಿದೆ.

ದೇಶದ ಎಲ್ಲಾ ನಗರಗಳಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ! ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿಯೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗರಿಷ್ಟ ಮಟ್ಟದಲ್ಲಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ.

ಅದೇ ರೀತಿ ಡೀಸೆಲ್ ದರವನ್ನು ಪರಿಶೀಲಿಸಿದಾಗ ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಡೋಸೆಲ್ ದರ 94.39 ರೂಪಾಯಿ ಹಾಗೂ ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಆಗಸ್ಟ್​ ತಿಂಗಳಿನಲ್ಲಿ ಇಂಧನ ದರ ಇಳಿಕೆಯತ್ತ ಸಾಗುವ ನಿರೀಕ್ಷೆಯಿಲ್ಲ! ಆಗಸ್ಟ್​ ತಿಂಗಳಿನಲ್ಲಿಯೂ ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಳಿಕೆ ಕಂಡು ಬರುವ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 21 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಇಂದೂ ಸಹ ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:50 am, Sun, 8 August 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ