Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

| Updated By: shruti hegde

Updated on: Aug 08, 2021 | 8:12 AM

Petrol Rate Today (August 8) : ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಕಳೆದ ಮೂರು ವಾರಗಳಿಂದಲೂ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ತೈಲ ದರ ಯಥಾಸ್ಥಿತಿಯಲ್ಲಿದೆ.

Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಪಿಟಿಐ ಚಿತ್ರ
Follow us on

Petrol Diesel Rate Today | ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಂದು (ಆಗಸ್ಟ್ 8, ಭಾನುವಾರ) ಯಾವುದೇ ಬದಲಾವಣೆ ಕಂಡಿಲ್ಲ. ಸತತ 22 ದಿನಗಳ ಕಾಲ ಇಂಧನ ದರ (Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ ಆ ಕಾರಣ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 89.87 ರೂಪಾಯಿ ಇದೆ. ಕಳೆದ ಮೂರು ವಾರಗಳಿಂದಲೂ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ತೈಲ ದರ ಯಥಾಸ್ಥಿತಿಯಲ್ಲಿದೆ.

ದೇಶದ ಎಲ್ಲಾ ನಗರಗಳಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ!
ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿಯೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗರಿಷ್ಟ ಮಟ್ಟದಲ್ಲಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.49 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಇದೆ.

ಅದೇ ರೀತಿ ಡೀಸೆಲ್ ದರವನ್ನು ಪರಿಶೀಲಿಸಿದಾಗ ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 97.45 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಡೋಸೆಲ್ ದರ 94.39 ರೂಪಾಯಿ ಹಾಗೂ ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ.

ಆಗಸ್ಟ್​ ತಿಂಗಳಿನಲ್ಲಿ ಇಂಧನ ದರ ಇಳಿಕೆಯತ್ತ ಸಾಗುವ ನಿರೀಕ್ಷೆಯಿಲ್ಲ!
ಆಗಸ್ಟ್​ ತಿಂಗಳಿನಲ್ಲಿಯೂ ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಳಿಕೆ ಕಂಡು ಬರುವ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾನಗರಗಳಿಲ್ಲಿಯೂ ಸಹ ಹಳೆದ 21 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಇಂದೂ ಸಹ ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 7:50 am, Sun, 8 August 21