Petrol Price Today: ಈಗಲೇ ಗರಿಷ್ಠ ಮಟ್ಟದಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ! ಇಂದು ಸಹ ಹೆಚ್ಚಳವಾಗಿದೆಯೇ?

Petrol Diesel Rate Today: ನಿನ್ನೆ ತೈಲ ದರ ಹೆಚ್ಚಳದ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.56 ರೂ. ಹಾಗೂ ಲೀಟರ್​ ಡೀಸೆಲ್ ದರ 86.47 ರೂಪಾಯಿ ಆಗಿದೆ. ಇಂದು (ಗುರವಾರ, ಜೂನ್​ 10) ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣಿಗಳಿಲ್ಲ.

Petrol Price Today: ಈಗಲೇ ಗರಿಷ್ಠ ಮಟ್ಟದಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ! ಇಂದು ಸಹ ಹೆಚ್ಚಳವಾಗಿದೆಯೇ?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shruti hegde

Updated on:Jun 10, 2021 | 8:30 AM

ದೆಹಲಿ: ನಿನ್ನೆ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಹೆಚ್ಚಳ ಮಾಡಿತ್ತು. ಮೇ 4ರಿಂದ ಏರಿಕೆ ಕಾಣುತ್ತಿರುವ ಇಂಧನ ದರ ಇಲ್ಲಿಯವರೆಗೂ ಏರುತ್ತಲೇ ಇದೆ. ನಿನ್ನೆ ತೈಲ ದರ ಹೆಚ್ಚಳದ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.56 ರೂ. ಹಾಗೂ ಲೀಟರ್​ ಡೀಸೆಲ್ ದರ 86.47 ರೂಪಾಯಿ ಆಗಿದೆ. ಇಂದು (ಗುರವಾರ, ಜೂನ್​ 10) ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣಿಗಳಿಲ್ಲ.

ಈಗಾಗಲೇ ಮುಂಬೈ, ರಾಜಸ್ಥಾನ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿದೆಡೆ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇನ್ನು ರಾಜಸ್ಥಾನದ ಗಂಗಾನಗರ್​ನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರವೂ ಕೂಡಾ ಶತಕದ ಅಂಚಿನಲ್ಲಿಯೇ ನಿಂತಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಇಂಧನ ದರ ಏರಿಕೆ ಕಂಡರೆ, ಡೀಸೆಲ್​ ದರವೂ ಸಹ ಶತಕ ಬಾರಿಸುವಲ್ಲಿ ಯಾವುದೇ ಅನುಮಾನವಿಲ್ಲ. ಇತಿಹಾಸದಲ್ಲೇ ಮೊದಲ ಬಾರಿಗೆ ಪೆಟ್ರೋಲ್​, ಡೀಸೆಲ್​ ದರ ಗರಿಷ್ಠ ಮಟ್ಟದಲ್ಲಿ ನಿಂತಿದೆ.

                      ಪೆಟ್ರೋಲ್ ದರ(ಲೀ)   ಡೀಸೆಲ್ ದರ(ಲೀ)

ದೆಹಲಿ               95.56                           86.47 ಕೋಲ್ಕತ್ತಾ        95.52                           89.32 ಮುಂಬೈ            101.76                          93.85 ಚೆನ್ನೈ                96.94                            91.15 ಭೂಪಾಲ್​        103.71                           95.05 ಬೆಂಗಳೂರು       98.75                            91.67 ರಾಂಚಿ               91.86                             91.29 ಪಾಟ್ನಾ              97.67                             91.77 ಚಂಡೀಗಢ        91.91                              86.12 ಲಕ್ನೋ               92.81                              86.87

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:28 am, Thu, 10 June 21

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ