ದೆಹಲಿ: ನಿನ್ನೆ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿತ್ತು. ಮೇ 4ರಿಂದ ಏರಿಕೆ ಕಾಣುತ್ತಿರುವ ಇಂಧನ ದರ ಇಲ್ಲಿಯವರೆಗೂ ಏರುತ್ತಲೇ ಇದೆ. ನಿನ್ನೆ ತೈಲ ದರ ಹೆಚ್ಚಳದ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.56 ರೂ. ಹಾಗೂ ಲೀಟರ್ ಡೀಸೆಲ್ ದರ 86.47 ರೂಪಾಯಿ ಆಗಿದೆ. ಇಂದು (ಗುರವಾರ, ಜೂನ್ 10) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣಿಗಳಿಲ್ಲ.
ಈಗಾಗಲೇ ಮುಂಬೈ, ರಾಜಸ್ಥಾನ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿದೆಡೆ ಪೆಟ್ರೋಲ್ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇನ್ನು ರಾಜಸ್ಥಾನದ ಗಂಗಾನಗರ್ನಲ್ಲಿ ಪ್ರತಿ ಲೀಟರ್ ಡೀಸೆಲ್ ದರವೂ ಕೂಡಾ ಶತಕದ ಅಂಚಿನಲ್ಲಿಯೇ ನಿಂತಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಇಂಧನ ದರ ಏರಿಕೆ ಕಂಡರೆ, ಡೀಸೆಲ್ ದರವೂ ಸಹ ಶತಕ ಬಾರಿಸುವಲ್ಲಿ ಯಾವುದೇ ಅನುಮಾನವಿಲ್ಲ. ಇತಿಹಾಸದಲ್ಲೇ ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟದಲ್ಲಿ ನಿಂತಿದೆ.
ಪೆಟ್ರೋಲ್ ದರ(ಲೀ) ಡೀಸೆಲ್ ದರ(ಲೀ)
ದೆಹಲಿ 95.56 86.47
ಕೋಲ್ಕತ್ತಾ 95.52 89.32
ಮುಂಬೈ 101.76 93.85
ಚೆನ್ನೈ 96.94 91.15
ಭೂಪಾಲ್ 103.71 95.05
ಬೆಂಗಳೂರು 98.75 91.67
ರಾಂಚಿ 91.86 91.29
ಪಾಟ್ನಾ 97.67 91.77
ಚಂಡೀಗಢ 91.91 86.12
ಲಕ್ನೋ 92.81 86.87
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:28 am, Thu, 10 June 21